ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದಲ್ಲಿ ಗುರುವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಂಚರತ್ನ ಯೋಜನೆ ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನಸಿನ ಕರ್ನಾಟಕ ನಿರ್ಮಾಣ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಅವರು ರೂಪಿಸಿರುವ ಜಲಧಾರೆ ಯೋಜನೆ ನೀರಿನ ಅಭಾವ ಎದುರಿಸುತ್ತಿರುವ ಜಿಲ್ಲೆಗಳ ಜನರ ಪಾಲಿಗೆ ಆಶಾಕಿರಣವಾಗಿದೆ. ಈ ಯೋಜನೆ ಸಾಕಾರಗೊಂಡಲ್ಲಿ ಬಾಯಾರಿದ ಜಿಲ್ಲೆಗಳಿಗೆ ಕುಡಿಯಲು ಹಾಗೂ ಕೃಷಿ ಬಳಕೆಗೆ ನೀರು ಪೂರೈಸಲಾಗುವುದು. ಬದಲಾದ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳು ಕೃಷಿಕರನ್ನು ಮದುವೆಯಾಗಲು ಮುಂದೆ ಬರುತ್ತಿಲ್ಲ. ಹಾಗಾಗಿ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣಿಗೆ ರೂ.೨ ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದರು.
ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕ ರೂ.೧೦ ಸಾವಿರ ನೀಡಲಾಗುವುದು. ವೃದ್ಧಾಪ್ಯ ವೇತನ ರೂ.೫ ಸಾವಿರಕ್ಕೆ ಹೆಚ್ಚಿಸಲಾಗುವುದು. ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಡೆದುಕೊಂಡಿರುವ ಬಡ್ಡಿರಹಿತ ಹಾಗೂ ಬಡ್ಡಿ ಸಹಿತ ಸಾಲ ಮನ್ನಾ ಮಾಡಲಾಗುವುದು. ಇದೆಲ್ಲವೂ ಸಾಧ್ಯವಾಗಬೇಕಾದರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ತರುವ ಹೊಣೆ ಮತದಾರರ ಮೇಲಿದೆ ಎಂದು ಹೇಳಿದರು.
‘ನಾನು ಶಾಸಕನಾಗಿದ್ದ ನಾಲ್ಕು ಅವಧಿಯಲ್ಲಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಏನಾದರೂ ಅಭಿವೃದ್ಧಿ ಆಗಿದ್ದರೆ ಅದು ನನ್ನ ಅವಧಿಯಲ್ಲಿ ಮಾತ್ರ. ಮತದಾರರು ಆಶೀರ್ವಾದ ಮಾಡುವುದರ ಮೂಲಕ ಇನ್ನಷ್ಟು ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಲೇ ಪೇಟೆ ಮಂಜುನಾಥ ರೆಡ್ಡಿ, ಬಾಲಾವಿ ಜಯರಾಂ, ಪುರಸಭೆ ಸದ್ಯಸ ರಾದ ಬಿ.ವೆಂಕಟರೆಡ್ಡಿ, ಅಪ್ಪೂರು ರಾಜು, ಆನಂದ್, ಮುಖಂಡ ರಾದ ಪೂಲ ಶಿವಾರೆಡ್ಡಿ,ಸಿ ರವಿ,ಬಿಂದು ಶ್ರೀನಿವಾಸರೆಡ್ಡಿ, ನಂದ ಕುಮಾರ್ ಮಂಜುನಾಥರೆಡ್ಡಿ, ವೇಣುಗೋಪಾಲರೆಡ್ಡಿ, ಶೊರೋಮ್. ನಾರಾಯಣಸ್ವಾಮಿ, ರಂಗಪ್ಪ, ಮಂಜು, ಜಗದೀಶ್, ಸಂತೋಷ್, ಶ್ರೀನಾಥರೆಡ್ಡಿ, , ಸದಾಶಿವ, , ಇದ್ದರು