

ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಪತ್ನಿ ನಾಗರತ್ನ ಶೆಟ್ಟಿ (80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಧಾರ್ಮಿಕ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಬಸ್ರೂರು ಹಾಗೂ ಕೊಲ್ಲೂರಿನ ಕೂಡುರಿನ ಪರಿಸರದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು.ಮೃತರಿಗೆ ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ
ಅಂತ್ಯಕ್ರಿಯೆ:
ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಬಸ್ರೂರಿನ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.
