

ಉಡುಪಿ (ಫೆ.07): ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರು ತಮ್ಮ 91 ವರ್ಷನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ
ಅಪ್ಪಣ್ಣ ಹೆಗ್ಡೆಯವರು 1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಆಗಿದ್ದ ಹೆಗ್ಡೆ ಅವರು ಪ್ರಾಮಾಣಿಕ ಸೇವೆಗಾಗಿ ಖ್ಯಾತರಾಗಿದ್ದರು.
ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ
ಶಾಸಕರಾಗಿ ಕಾರ್ಯನಿರ್ವಹಿಸಿದ ಅವರು ತಮ್ಮ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ವಾಗ್ಮಿ ಮತ್ತು ಸಂಘಟಕ ಚತುರ, ಉತ್ತಮ ಮಾರ್ಗದರ್ಶಿ
ಬಸ್ರೂರು ಅಪ್ಪಣ್ಣ ಹೆಗ್ಡೆ ಎಂದರೆ ಎಲ್ಲರಿಗೂ ಗೌರವಕ್ಕೆ ಪಾತ್ರರಾಗಿದ್ದರು. ಅವರು ಸಂಘಟಕ ಚತುರರಾಗಿದ್ದರು ಮತ್ತು ಒಳ್ಳೆಯ ವಾಗ್ಮಿಯಾಗಿದ್ದು ಹೋರಾಟ, ಸಮಸ್ಯೆಗಳ ಪರಿಹಾರಕ್ಕೆ ಉತ್ತಮ ಮಾರ್ಗದರ್ಶಿಯಾಗಿದ್ದರು.

ಜನನುಡಿ ಸುದ್ದಿ ಸಂಸ್ಥೆಯ ಹಳೆಯ ಸುದ್ದಿಗಳಲ್ಲಿ ಒಂದಾದ ಒಂದು ಫೋಟೊ ಇದು

