JANANUDI.COM NETWORK
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯರ 31ನೇ ಪುಣ್ಯಸ್ಮರಣೆ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಯಿತು.
ಆನಗಳ್ಳಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಂಗಾಧರ್ ಶೆಟ್ಟಿಯವರು ರಾಜೀವ್ ಗಾಂಧಿಯವರು ದೇಶದ ಜನರ ಧ್ವನಿಯಾಗಿದ್ದರು ಎಂದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ಮಾತನಾಡುತ್ತಾ ರಾಜೀವ್ ಗಾಂಧಿಯ ಆಡಳಿತ ಅವಧಿಯಲ್ಲಿ ಸಂವಿಧಾನದ 73ನೇ ವಿಧಿಯನ್ನು ತಿದ್ದುಪಡಿಯನ್ನು ತಂದು ಪಂಚಾಯತ್ ರಾಜ್ ವ್ಯವಸ್ಥೆಯ ಆಡಳಿತದಲ್ಲಿ ಸಮಾಜದ ಎಲ್ಲ ವರ್ಗದ ಜನರಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವನ್ನು ಪಡೆಯುವಂತಾಯಿತು ಎಂದರು.
ಸಭೆಯಲ್ಲಿ ಮಹಿಳಾ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಮಾಜಿ ಪುರಸಭಾ ಸದಸ್ಯ ಸುಭಾಷ್ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ ,ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್, ಜೋಸೆಫ್ ರೆಬೆಲ್ಲೋ, ಸಚಿನ್ ಕುಮಾರ್, ದಿನೇಶ್ ಬೆಟ್ಟ ಇತರರು ಉಪಸ್ಥಿತರಿದ್ದರು
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಸ್ವಾಗತಿಸಿ ,ಜಿಲ್ಲಾ ಯುವಪ್ರಧಾನ ಕಾರ್ಯದರ್ಶಿ ಅಭಿಜಿತ್ ಪೂಜಾರಿ ನಿರೂಪಿಸಿ, ಮಾಜಿನಾಮನಿರ್ದೇಶಿತ ಪುರಸಭಾ ಸದಸ್ಯರಾದ ಕೇಶವ ಭಟ್ ವಂದಿಸಿದರು.