ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ, ಕ್ರೈಸ್ತ ಸಮಾಜದ ಪ್ರಭಾವಿ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ನಿಧನ

JANANUDI.COM NETWORK


ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ, ಕ್ರೈಸ್ತ ಸಮಾಜದ ಪ್ರಭಾವಿ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ಬಹಳ ಸಮಯದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೆಲವು ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆದಿತ್ತು. ಚೇತರಿಕೆ ಕಂಡು ಬರುವುದೆಂಬ ಆಶಾ ಭಾವನೆ ಇತ್ತು, ಆದರೆ ಚೇತರಿಸಿಕೊಳ್ಳಲಿಲ್ಲ, ಈಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
1941, ಮಾರ್ಚ್ 27ರಂದು ಆಸ್ಕರ್ ಫರ್ನಾಂಡಿಸ್ ಉಡುಪಿಯಲ್ಲಿ ಜನಿಸಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು. 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಅವಧಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಕಾರ್ಮಿಕ ಸಚಿವರಾಗಿ ಕಾರನಿರ್ವಹಿಸಿದ್ದರು. ಅವರು ರಾಜೀವ್ ಗಾಂಧಿಯವರ ಸಂಸದೀಯ ಕಾರ್ಯದರ್ಶಿಯಾಗಿದ್ದರು..
ಗಾಂಧಿ ಕುಟುಂಬಕ್ಕೆ ತೀರಾ ಹತ್ತಿರವಾಗಿದ್ದ ಅವರು, ಇಂದಿರ ಗಾಂಧಿಗೆ ಆಪ್ತರಾಗಿದ್ದರು. ಕಾಂಗ್ರೆಸ್ ನ ಪ್ರಮುಖ ನಿರ್ಧಾರಗಳಲ್ಲಿ ಮುಂಚೂಣಿ ಪಾತ್ರ ವಹಿಸುತಿದ್ದರು.