


ಕುಂದಾಪುರ : ಜನೆವರಿ 21ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ. ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಚರ್ಮ ಚಿಕಿತ್ಸಾ ವಿಭಾಗ ಮತ್ತು ಹೆಗ್ಡೆ ಆಂಡ್ ಹೆಗ್ಡೆ ಫಾರ್ಮಾಸ್ಯುಟಿಕಲ್ ಲಿಮಿಟೆಡ್, ಮುಂಬೈ ಇವರ ಸಹಯೋಗದಲ್ಲಿ “ಉಚಿತ ಚರ್ಮದ ಆರೈಕೆ ಚಿಕಿತ್ಸೆ ಮತ್ತು ಔಷಧಿ ವಿಚಾರಣಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಚರ್ಮ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ಸತೀಶ್ ಪೈ ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ ಸತ್ಯನಾರಾಯಣ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸುರೇಂದ್ರ ಹೆಚ್.ಹೆಚ್. ಉಪಸ್ಥಿತರಿದ್ದರು.
ನಂತರ ಹೆಚ್ಚಿನ ವಿದ್ಯಾರ್ಥಿಗಳು ಈ ಉಚಿತ ಚರ್ಮ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಂಡರು.

