ವರದಿ: ವಾಲ್ಟರ್ ಮೊಂತೇರೊ,ಬೆಳ್ಮಣ್ಣು ಸಂಪಾದಕರು: ಬರ್ನಾಡ್ ಡಿ’ಕೋಸ್ತಾ
ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಂಯಿಂದ ಅಬ್ಬನಡ್ಕ ಸಂಘದ ರಂಗಮಂದಿರದಲ್ಲಿ ಬುಧವಾರ ನಮ್ಮ ದೇಶದ ಶ್ರೇಷ್ಠ ರಾಜನೀತಿ ತಜ್ಞ, ನ್ಯಾಯವಾದಿ, ಶಿಕ್ಷಣ ತಜ್ಞರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಉಡುಪಿ ನೆಹರು ಯುವ ಕೇಂದ್ರ ಜಿಲ್ಲಾ ಯುವ ಸಮಾನ್ವಾಯಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರ ಮಾರ್ಗದರ್ಶನದಂತೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ, ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದವರು ಶ್ಯಾಮ ಪ್ರಸಾದ್ ಮುಖರ್ಜಿ ಅವರು ಭಾರತದ ಏಕತೆ ಮತ್ತು ಪ್ರಗತಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಉನ್ನತ ಆದರ್ಶಗಳು ಲಕ್ಷಾಂತರ ಜನರಿಗೆ ಪ್ರೇರಕವಾಗಿವೆ ಎಂದು ಹೇಳಿದರು.
ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಬೋಳ ರಘವೀರ್ ಶೆಟ್ಟಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸತೀಶ್ ಅಬ್ಬನಡ್ಕ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೊಟ್ಯಾನ್, ಭಜನಾ ಮಂಡಳಿಯ ಸದಸ್ಯರಾದ ಸಾಕ್ಷಿ ಕುಲಾಲ್, ಸ್ಪರ್ಶ್, ನಿಹಾಲ್, ಸ್ಪೂರ್ತಿ, ವಿಧಿನ್ ಮೊದಲಾದವರಿದ್ದರು.