ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್ ಫೈನಲ್ ಪಂದ್ಯಾವಳಿಯಲ್ಲಿ ಮುಳಬಾಗಿಲು ತಾಲ್ಲೂಕು ನೌಕರರ ತಂಡ ಅತಿಥೇಯ ಕೋಲಾರ ತಂಡವನ್ನು ಮಣಿಸಿ ಗೆಲುವಿನ ನಗೆ ಬೀರಿದ್ದು, ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್‍ಬಾಬು ಅಭಿನಂದಿಸಿದರು. ತಂಡದ ನಾಯಕ ಸುಬ್ರಮಣಿ ರೆಡ್ಡಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ತಮ್ಮದಾಗಿಸಿಕೊಂಡರು. ತಂಡವನ್ನು ತಂಡವನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್‍ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷರಾದ ಎಂ.ನಾಗರಾಜ್, ಪುರುಷೋತ್ತಮ್, ಮಂಜುನಾಥ್, ಕಾರ್ಯದರ್ಶಿ ಶಿವಕುಮಾರ್, ಕ್ರೀಡಾಕಾರ್ಯದರ್ಶಿ ಶ್ರೀರಾಮ್ ಅಭಿನಂದಿಸಿದರು.