ಮೂಡುಬೆಳ್ಳೆಯಲ್ಲಿ ಗಾಂಧಿ ಜಯಂತಿ ಆಚರಣೆ ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿಶೇಷ ಗ್ರಾಮ ಸಭೆ ಆಯೋಜನೆ

JANANUDI.COM NETWORK

ಬೆಳ್ಳೆ ಗ್ರಾಮ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂತಲಾರೆನ್ಸ್ ಪದವಿಪೂರ್ವ ಕಾಲೇಜು ,ಎಸ್ಎಲ್ಆರ್ ಎಂ ಘಟಕ ಹಾಗೂ ಲಯನ್ಸ್ ಹಾಗೂ ಲಿಯೋ ಕ್ಲಬ್ ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ಮತ್ತು ವಿಶೇಷ ಗ್ರಾಮಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುಧಾಕರ ಪೂಜಾರಿ ಗ್ರಾಮ ಪಂಚಾಯತ್ ಅಧ್ಯಕ್ಷರು ವಹಿಸಿದ್ದರು .ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು ,ಸದಸ್ಯರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ, ಎನ್ಎಸ್ಎಸ್ ಯೋಜನಾಧಿಕಾರಿ ಜನತಾ ಲೋಬೊ ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಲೇರಿಯನ್ ನೊರೊನಾ, ಉಪನ್ಯಾಸಕರು ವಿದ್ಯಾರ್ಥಿಗಳು, ಪಂಚಾಯತ್ ಹಾಗೂ ಎಸ್ಎಲ್ ಆರ್ ಎಂ ಘಟಕದ ಸಿಬ್ಬಂದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು .ನಂತರ ವಿಶೇಷ ಗ್ರಾಮ ಸಭೆ ನಡೆಯಿತು. ನರೇಗಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಮೂಡ ಬೆಳೆಯನ್ನು ಪ್ಲಾಸ್ಟಿಕ್ ಮುಕ್ತ ಪರಿಸರ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಪಂಚಾಯತ್ ಅಧ್ಯಕ್ಷರು ಕರೆ ನೀಡಿದರು. ಸಭಾ ಕಾರ್ಯಕ್ರಮದ ನಂತರ ಆಜಾದಿ ಕಾ ಅಮ್ರತ್ ಮಹೋತ್ಸವದ ಅಂಗವಾಗಿ ಪರಿಸರದಲ್ಲಿ ಪ್ಲಾಸ್ಟಿಕ್ ಪ್ಲಾಸ್ಟಿಕ್ ಹೆಕ್ಕಿಕೋ ಹಾಗು ಸ್ವಚ್ಛ ಭಾರತ ಕಾರ್ಯಕ್ರಮದ ಶ್ರಮದಾನ ನಡೆಯಿತು.