

ಬೆಂಗಳೂರಿನ ‘ಮಯೂರ ಗ್ರೂಪ್’ನ ಸಿ. ಎಂ. ಡಿ., ಚೇಯರ್ಮೆನ್, ಬೇಕರಿ, ಹೋಟೆಲ್ ಉದ್ಯಮ ಹಾಗೂ ಗುಣಮಟ್ಟದ ಆಹಾರ ಉತ್ಪನ್ನದಲ್ಲಿ ಹೆಸರುವಾಸಿಯಾಗಿರುವ ಗೋಪಾಡಿ ಶ್ರೀನಿವಾಸ ರಾವ್ ಅವರಿಗೆ ಕರ್ನಾಟಕ ಹೋಟೆಲ್ ಅಸೋಸಿಯೇಶನ್ (ರಿ.) ವತಿಯಿಂದ ‘ಆತಿಥ್ಯ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಮೇ 29 ರಂದು ಬೆಂಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ಗೋಪಾಡಿ ಶ್ರೀನಿವಾಸ ರಾವ್ ಅವರು ಧಾರ್ಮಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ನೀಡಿದ ಸೇವೆಯನ್ನು ಗುರುತಿಸಲಾಗಿದ್ದು, ಈ ಅನಘ್ಯ ಕಾಣಿಕೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಗೋಪಾಡಿ ಶ್ರೀನಿವಾಸ ರಾವ್ ಅವರು, ತಮ್ಮ ಗೋಪಾಡಿ ಶ್ರೀನಿವಾಸ ರುಕ್ಷ್ಮಿಣಿ ಫೌಂಡೇಶನ್ ಮೂಲಕ ಕೋಟೇಶ್ವರ, ಗೋಪಾಡಿ, ಬೀಜಾಡಿ, ಕುಂಭಾಸಿ ಪರಿಸರದ ಶಾಲೆಗಳಿಗೆ ಅಗತ್ಯ ಸೌಲಭ್ಯ ನೀಡಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಧಾರ್ಮಿಕವಾಗಿಯೂ ಸ್ಥಳೀಯ ದೇವಸ್ಥಾನಗಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರ ಕುಂದಾಪುರದ ಕೇಕ್ವಾಲ ಮತ್ತು ಈಶಾನ್ಯ, ಬಹಳ ಜನಪ್ರಿಯವಾಗಿದೆ.
ಗೋಪಾಡಿ ಶ್ರೀನಿವಾಸ ರಾವ್ ಅವರು ಈಗಾಗಲೇ ರಾಜ್ಯಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

