ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಅಂಥ ನೌಕರರು ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೇರೆಡೆಗೆ ವರ್ಗವಾದ ಉಪ ತಹಶೀಲ್ದಾರ್ ಮಲ್ಲೇಶ್, ಶಿರಸ್ತೇದಾರ್ ಜಿ.ಆರ್.ಭಾಸ್ಕರ್ ಅವರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರದ ಕೆಲಸ ದೇವರ ಕೆಲಸ ಎಂದು ಮಾಡಿದಾಗ ಮಾತ್ರ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್, ಉಪ ತಹಶೀಲ್ದಾರ್ ಚಂದ್ರಪ್ಪ, ಶಿರಸ್ತೇದಾರರಾದ ಬಿ.ಆರ್.ಮುನಿವೆಂಕಟಪ್ಪ, ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ವಿನೋದ್, ಗುರುರಾಜರಾವ್, ಬಲರಾಮಯ್ಯ, ವಿ.ಆರ್.ಭೀಮರಾವ್ ಇದ್ದರು.