


ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕಿನ ಭೂಸಂತ್ರಸ್ತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶ್ರೀನಿವಾಸಪುರ ಭೂಸಂತ್ರಸ್ತರ ಹೋರಾಟ ಸಮಿತಿ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮುಖಂಡರು ಭೂಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೇಡಿಕೆಗಳು ಹಾಗೂ ನ್ಯಾಯಯುತ ಹಕ್ಕುಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಮನವಿ ಸಲ್ಲಿಸಿದರು.
ಹೋರಾಟ ಸಮಿತಿಯ ಮುಖಂಡರು ಹಾಗೂ ದಲಿತ ಸಂಘರ್ಷ ಸಮಿತಿಯ ಅಂತರರಾಜ್ಯ ಸಂಚಾಲಕರಾದ ಎನ್. ಮನುಷ್ಯಸ್ವಾಮಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ಆರ್. ಸೂರ್ಯನಾರಾಯಣ, ಕೆಪಿಆರ್ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತುಕೋಟೆ ನವೀನ್ ಕುಮಾರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಸಿ.ವಿ. ಮುನಿವೆಂಕಟಪ್ಪ, ಭೂಸಂತ್ರಸ್ತರ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೈಯದ್ ಫಾರೂಕ್ ಭಾಗವಹಿಸಿದ್ದರು.
ಇದಲ್ಲದೆ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಬಂದಾರ್ಲಪಲ್ಲಿ ಮುನಿಯಪ್ಪ, ನಾಗದೇವನಹಳ್ಳಿ ಶ್ರೀನಿವಾಸ್, ತಿಮ್ಮಸಂದ್ರ ಮುಳುಬಾಗಿಲಪ್ಪ, ಮುದಿಮಡುಗು ವಾಸು ಹಾಗೂ ರೈತ ಸಂಘದ ಮುಖಂಡರಾದ ಗಂಗಮ್ಮ, ಜಿ. ಮಂಜುಳಾ ಮತ್ತು ಮುನಿರತ್ನಮ್ಮ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಭೂಸಂತ್ರಸ್ತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಂತ್ರಸ್ತರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

