ಸರ್ಕಾರ ಕಾರ್ಮಿಕರಿಗೆ ಹೆಚ್ಚು ಸೌಲಭ್ಯಗಳನ್ನು ಒದಗಿಸಬೇಕು : ಜಿ.ಕೆ.ವೆಂಕಟಶಿವಾರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಸರ್ಕಾರ ಕಾರ್ಮಿಕರಿಗೆ ಹೆಚ್ಚು ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯ ಮಾಡಿದರು. ಕಾರ್ಮಿಕರಿಲ್ಲದೆ ದೇಶ ಇಲ್ಲ, ದೇಶ ಅರ್ಥಿಕವಾಗಿ ಸದೃಡವಾಗಲು ಕಾರ್ಮಿಕರ ಕಾರಣ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಮಿಕರು ತಮ್ಮ ಮಕ್ಕಳಿಗೆ ಆಸ್ತಿ, ಅಂತಸ್ತು ಮಾಡುವುದರ ಬದಲು, ತಮ್ಮ ಮಕ್ಕಳನ್ನು ವಿದ್ಯಾವಂತರಾಗಿಸಿ, ಉನ್ನತ ವ್ಯಾಸಂಗ ಕೊಡಿಸುವಂತೆ ಸಲಹೆ ನೀಡಿದರು. ಕಾರ್ಮಿಕರು ಸಂಘಟಿಕರಾಗಬೇಕು ಹಾಗು ಕಾರ್ಮಿಕರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವಂತೆ ಸಲಹೆ ನೀಡಿ, ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ಜೆಡಿಎಸ್ ಪಕ್ಷದ ರಾಜ್ಯದ ಮುಖಂಡ ಬಿ.ವಿ.ಶಿವಾರೆಡ್ಡಿ ಮಾತನಾಡಿ ಕಾರ್ಮಿಕರ ಸಮಸ್ಯೆಗೆ ಯಾವಾಗಲೂ ನಮ್ಮ ಸಹಕಾರವಿದೆ. ನಿಮ್ಮ ಆರೋಗ್ಯದ ಕಡೆ ಗಮನಹರಿಸಿ ಹಾಗೂ ನಿಮ್ಮ ಮಕ್ಕಳನ್ನು ಒಳ್ಳೇಯ ವಿದ್ಯಾವಂತರಾಗಿಸಿ ಎಂದರು.
ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರದಾನ ಕಾರ್ಯದರ್ಶಿ ವಿ.ಆನಂದ್ ಮಾತನಾಡಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗಾಗಿ ಅನೇಕ ಸೌಲಭ್ಯಗಳಿದ್ದು, ಪ್ರತಿಯೊಬ್ಬ ಕಾರ್ಮಿಕರು ಕಾರ್ಮಿಕ ಕಾರ್ಡ್ ಹಾಗು ಆರೋಗ್ಯ ಕಾರ್ಡ್‍ನ್ನು ಮಾಡಿಸಿಕೊಂಡು ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕಗಳನ್ನು ಕಾರ್ಮಿಕರ ಮಕ್ಕಳಿಗೆ ಸನ್ಮಾನಿಸಲಾಯಿತು. ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ. ಕಟ್ಟಡ ಇತರೆ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ರಾಮಚಂದ್ರ, ಸಮಾಜ ಸೇವಕಿ ಗಾಯತ್ರಿ ಮುತ್ತಪ್ಪ, ಮುಖಂಡರಾದ ಅಂಬೇಡ್ಕರ್ ಪಾಳ್ಯ ರವಿ, ಗೂರವಿಮಾಕಲಪಲ್ಲಿ ಶ್ರೀನಿವಾಸ್, ಎನ್.ಚಲಪತಿ, ಸುದಾ , ಸತ್ಯನಾರಾಯಣ, ಆದೆಪ್ಪ ಇತರರು ಇದ್ದರು.
ಪೋಟು 1 : ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರನ್ನು ಜಿ.ಕೆ.ವೆಂಕಟಶಿವಾರೆಡ್ಡಿ ಸನ್ಮಾನಿಸಿದರು.