


ಬೀಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ ಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ರೂವಾರಿ-2023 ಭಾವ-ನೆನಪುಗಳ ಸಂಗಮ ಕಾರ್ಯಕ್ರಮ ಸೆ.24ರಂದು ಬೀಜಾಡಿ ಮೂಡು ಶಾಲಾ ವಠಾರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ. ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ,ವಿವಿಧ ಮನೋರಂಜನಾ ಆಟಗಳು ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೂಪ್ ಕುಮಾರ್ ಬಿ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ