ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವುದು:ಡಾ. ವೈ.ಎ.ನಾರಾಯಣ ಸ್ವಾಮಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವುದು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನಲ್ಲಿ ಮಾವಿನ ಫಸಲು ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಬಳಿಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಕಾ ಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಶೇ.30 ರಷ್ಟು ಮಾವಿನ ಫಸಲು ಬಂದಿತ್ತು. ಮಳೆಯೊಂದಿಗೆ ಸುರಿದ ಬಿರುಗಾಳಿ ಹಾಗೂ ಆಲಿಕಲ್ಲಿನ ಹೊಡೆತಕ್ಕೆ ಸಿಕ್ಕಿ ಫಸಲು ಪೂರ್ಣ ಪ್ರಮಾಣದಲ್ಲಿ ಹಾಳಾಗಿದೆ ಎಂದು ಹೇಳಿದರು.
ನಷ್ಟದ ಪ್ರಮಾಣ ಹೆಚ್ಚಾಗಿರುವುದರಿಂದ ಪ್ರಸ್ತುತ ಇರುವ ನಷ್ಟ ಪರಿಹಾರ ನಿಯಮಗಳನ್ನು ಬದಿಗೆ ಸರಿಸಿ ಎಕರೆಯೊಂದಕ್ಕೆ ಕನಿಷ್ಠ ರೂ.25 ಸಾವಿರ ನೀಡುವಂತೆ ಮುಖ್ಯ ಮಂತ್ರಿಯ ಮನವೊಲಿಸಲಾಗುವುದು ಎಂದು ಹೇಳಿದರು.
ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಎಂದು ಹೇಳಿದರು.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಶೋಕರೆಡ್ಡಿ, ಮುಖಂಡರಾದ ಷಫಿವುಲ್ಲಾ, ರಾಮಾಂಜಿ, ರಮೇಶ್, ಸುರೇಶ್ ನಾಯಕ್, ಕೆ.ವಿ.ಕುಮಾರ್ ಇದ್ದರು.