ಕೋಲಾರ,ಸೆ.10: ನಗರದ ಸಹ್ಯಾದ್ರಿ ಪದವಿ ಕಾಲೇಜು ವತಿಯಿಂದ 2021-24ನೇ ಸಾಲಿನ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಮಹಿಳಾ ಕಾಲೇಜು ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಪ್ರಕಾಶ್ ಎನ್, ವಿದ್ಯಾರ್ಥಿಗಳು ತಾವು ಇಲ್ಲಿಂದ ನಿರ್ಗಮಿಸುತ್ತಿದ್ದೀರ ಎಂದರೆ ನಿಮ್ಮ ಜೀವನವನ್ನು ನೀವೇ ರೂಪಿಸಿಕೊಳ್ಳುತ್ತಿದ್ದೀರ ಹಾಗೂ ಜವಾಬ್ದಾರಿಗಳು ಹೆಚ್ಚಾಗುತ್ತದೆ ಎಂದು ತಿಳಿಸಿದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಿ.ಎ.ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ಜೀವನವನ್ನು ಹೇಗೆ ಛಲದಿಂದ ಬದುಕಬೇಕು. ಛಲ ಇದ್ದರೆ ಗುರಿ ತಾನಾಗೆ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಪದವಿ ಕಾಲೇಜು ಪ್ರಾಂಶುಪಾಲ ಬಿ,ಬದ್ರಿನಾಥ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಗಣಕ ವಿಭಾಗದ ಮುಖ್ಯಸ್ಥ ಸಂತು ರಾಮ್ ಸಿಂಗ್, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಿ.ಬಿ.ರಾಧಿಕಾ, ವಾಣಿಜ್ಯ ವಿಭಾಗದ ಮುಖ್ಯಸ್ಥ ಕೆ.ಎಂ.ರಾಜಶೇಖರ್, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತ್ತು ಪೆÇೀಷಕರು ಉಪಸ್ಥಿತರಿದ್ದರು.
ಕನ್ನಡ ಆಧ್ಯಾಪಕ ಸಿ.ಮುನಿಶಾಮಪ್ಪ ನಿರೂಪಿಸಿ, ಪಿಯುಸಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ಪ್ರಾರ್ಥಿಸಿ, ಸಂತರಾಮ್ ಸಿಂಗ್ ವಂದಿಸಿದರು.
ವಿದ್ಯಾರ್ಥಿನಿ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಬಿ.ಎಸ್ಸಿ ಪದವಿ ಪಡೆದ ಅನ್ನಪೂರ್ಣ .ಎಸ್ ಎಂಬ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಒಂಬತ್ತು ಚಿನ್ನದ ಪದಕಗಳು ಹಾಗೂ ಮೂರು ನಗದು ಬಹುಮಾನಗಳನ್ನು ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಈ ವಿದ್ಯಾರ್ಥಿನಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ. ಉದಯ್ ಕುಮಾರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭ ಹಾರೃಸಿದ್ದಾರೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಸಹ್ಯಾದ್ರಿ ಪದವಿ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಬಿ.ಎಸ್ಸಿ ಪದವಿ ಪಡೆದ ಅನ್ನಪೂರ್ಣ .ಎಸ್ ಎಂಬ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಒಂಬತ್ತು ಚಿನ್ನದ ಪದಕಗಳು ಹಾಗೂ ಮೂರು ನಗದು ಬಹುಮಾನಗಳನ್ನು ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಈ ವಿದ್ಯಾರ್ಥಿನಿಗೆ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಉದಯ್ ಕುಮಾರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭ ಹಾರೃಸಿದ್ದಾರೆ.