

ಕುಂದಾಪುರ: ಸತ್ಯ, ಪ್ರಾಮಾಣಿಕ ಮತ್ತು ನೀತಿವಂತರಾಗಿರುವವರು ನಿಜವಾದ ಬುದ್ಧಿವಂತ ವಿದ್ಯಾರ್ಥಿಗಳು ಎಂದು ಮಲ್ನಾಡ್ ಕೋಚಿಂಗ್ ಸೆಂಟರ್, ಬೆಂಗಳೂರು ಆದ, ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಹೇಳಿದರು.
ಅವರು ಏಪ್ರಿಲ್ 16ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಪೋಷಕರು ಅವರು ಮಕ್ಕಳ ಜೊತೆ ಮುಕ್ತವಾಗಿ ಚರ್ಚಿಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಅದರ ಮಹತ್ವ ತಿಳಿಸಬೇಕು. ಸರ್ಕಾರಿ ಕೆಲಸಗಳನ್ನು ಪಡೆಯುವುದಕ್ಕೆ ಪೋಷಕರು ಪ್ರೇರೆಪಿಸಬೇಕು ಎಂದು ಹೇಳಿದರು.
ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಮತ್ತು ರಕ್ಷಕ – ಶಿಕ್ಷಕ ಸಂಘದ ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕಿ ಸ್ನೇಹ ಕಾರ್ಯಕ್ರಮ ನಿರೂಪಿಸಿದರು. ಇಂಗ್ಲಿಷ್ ಉಪನ್ಯಾಸಕ ಶಶಾಂಕ್ ಪಟೇಲ್ ವಂದಿಸಿದರು.



