JANANUDUI.COM NETWORK
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ವಿಧ್ಯಾಭ್ಯಾಸದ ಸುವರ್ಣ ಅವಕಾಶಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ ನಡೆಯಿತು.
ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಅಂಗಸಂಸ್ಥೆಯಾದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸೌಲಭ್ಯಗಳ ಲಭ್ಯವಿದೆ.ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವಿದ್ಯಾರ್ಥಿಗಳಿಗೆ ಶೇಕಡಾ 5ರಷ್ಟು ಸೀಟುಗಳನ್ನು ಕಾಯ್ದಿರಿಸುವಿಕೆ ಮತ್ತು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅಕಾಡೆಮಿ ಕೋಟಾದಲ್ಲಿ ಉತ್ತಮ ರೇಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮತ್ತು ಕಡಿಮೆ ಶುಲ್ಕದ ಸೌಲಭ್ಯವಿದೆ. ಎಂಬ ಮಾಹಿತಿಯನ್ನೂ ಮಣಿಪಾಲ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು ಆಗಮಿಸಿ ಸಂಪೂರ್ಣ ಮಾಹಿತಿಯನ್ನು ಸಮರ್ಪಕವಾಗಿ ನೀಡಿದರು.
ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ವರದರಾಜ ಪೈ ಮಾತನಾಡಿ ಮಣಿಪಾಲ ವಿಶ್ವವಿದ್ಯಾಲಯವು ವಿಶ್ವವಿಖ್ಯಾತಿ ಪಡೆದಿದೆ. ಅಲ್ಲಿ ಓದುವುದು ಕನಸಿನ ಮಾತು. ಮಣಿಪಾಲ ಅಕಾಡೆಮಿ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಒದಗಿ ಬಂದಿದೆ. ನಿಮ್ಮ ಕನಸುಗಳನ್ನು ಮಾಡುವ ಜೊತೆಗೆ ನಿಮ್ಮ ಹೆತ್ತವರು ಕನಸನ್ನು ಈಡೇರಿಸಿಕೊಳ್ಳಿ ಎಂದು ಹಿತವಚನ ನುಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಂ.ಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿದರು.