ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಗುಂಡಮನತ್ತ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥೆಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಮುನಿರತ್ನಮ್ಮ (58) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗ್ರಾಮದ ಹೊರ ವಲಯದ ಮಾವಿನ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.
ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿಠಲ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.