

ಕುಂದಾಪುರ (ಜನವರಿ 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅವನಿ ಎ ಶೆಟ್ಟಿಗಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023-24 ವೈಯಕ್ತಿಕ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಶೋಕ್ ಜಿ ಶೆಟ್ಟಿಗಾರ್ ಮತ್ತು ಸರಿತಾ ದಂಪತಿಯ ಹೆಮ್ಮೆಯ ಪುತ್ರಿಯಾದ ಈಕೆಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.