ಕುಂದಾಪುರ (ಎ. 14) : ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ವ್ಯವಹಾರ ಜ್ಞಾನ ಅತಿ ಮುಖ್ಯ. ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕಾದರೆ ಮಕ್ಕಳಿಗೆ ಎಲ್ಲರೊಂದಿಗೆ ಬೆರೆಯಲು ಮಾತಿನ ಕೌಶಲ್ಯ, ಲೆಕ್ಕಾಚಾರದ ವಿಚಾರ ತಿಳಿದಿರಬೇಕೆಂದು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಸಂಸ್ಥೆ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ನ 10ನೇ ದಿನದಲ್ಲಿ ಶಾಲಾ ವಠಾರದಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಯುತ ವಿಜಯ್ ರವರು ಮಾತನಾಡಿದರು. ಅವರು ಡಾ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನಗೈದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ| ಚಿಂತನಾ ರಾಜೇಶ್ ರವರು ವ್ಯಾಪಾರದ ಸಮಯದಲ್ಲಿ ಗ್ರಾಹಕರೊಂದಿಗೆ ಹೇಗೆ ಮಾತನಾಡಬೇಕು ಎಂಬುದನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು. ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರರು ಮತ್ತು ಪೋಷಕರು ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಅತ್ಯಂತ ಉತ್ಸಾಹದಿಂದ ಚಟುವಟಿಕೆಯಲ್ಲಿ ಪಾಲ್ಗೊಂಡರು. ಶಿಕ್ಷಕಿ ಪವಿತ್ರಾ ಪುತ್ರನ್ ಎಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.