ಕುಂದಾಪುರ (ಎ. 16) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಎನ್ನುವುದು ಒಂದು ವಿಶೇಷ, ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಬೇಸಿಗೆ ಶಿಬಿರವು ಒಂದು ಅದ್ಬುತ ವೇದಿಕೆ. ಮಕ್ಕಳು ಶಿಬಿರದಲ್ಲಿ ಕಲಿತಿರುವ ಉತ್ತಮ ಅಂಶಗಳನ್ನು ತಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೋಟೇಶ್ವರದ ಪ್ರಸಿದ್ಧ ಉದ್ಯಮಿ ಬೆಂಗಳೂರು ಅಯ್ಯಂಗಾರ್ ಬೇಕರಿ ಮಾಲೀಕರಾದ ಶ್ರೀ. ಬಿ. ಎಸ್. ವಿಶ್ವನಾಥ್ ರವರು ಹೇಳಿದರು.
ಅವರು ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2024 ಏಪ್ರಿಲ್ 15 ರಂದು ಸಮರೋಪ ಸಮಾರಂಭದಲ್ಲಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ರವರು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತಂದು ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಹಾಗೂ ಪ್ರಕೃತಿಯ ಜೊತೆ ನಿತ್ಯ ಸಂಪರ್ಕ ಹೊಂದುವಂತೆ ಮಾಡುವುದೇ ಈ ಶಿಬಿರದ ಮುಖ್ಯ ಉದ್ದೇಶ ಎಂದು ವಿಸ್ತಾರವಾಗಿ ಹೇಳಿದರು.
ಶಿಬಿರದ 11 ದಿನಗಳ ಕಾರ್ಯ ಚಟುವಟಿಕೆಗಳ ಕಿರು ಚಿತ್ರಣವನ್ನು ವೀಕ್ಷಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಪೋಷಕರು ಶಿಬಿರದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಶ್ರೀನಿವಾಸ, ರವಿಚಂದ್ರರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಎಲ್ಲ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರರು ಹಾಗೂ ಪೋಷಕರು ಉಪಸ್ಥಿತರಿದ್ದರು.