ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಟೊಮೆಟೊ ವರ್ತಕರ ಸಂಘದ ಅಧ್ಯಕ್ಷ ಎಚ್.ರವೀಂದ್ರರೆಡ್ಡಿ (47) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರು ಕೆಲವು ದಿನಗಳ ಹಿಂದೆ ಅಸ್ವಸ್ಥರಾಗಿ ಚೇತರಿಸಿಕೊಂಡಿದ್ದರು.
ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ.
ಮೃತರ ಅಂತ್ಯ ಸಂಸ್ಕಾರವನ್ನು ತಾಲ್ಲೂಕಿನ ಚಿಲ್ಲೊರಪಲ್ಲಿ ಗ್ರಾಮದ ಹೊರ ವಲಯದಲ್ಲಿ ಸೋಮವಾರ ನೆರವೇರಿಸಲಾಯಿತು.