

ಕುಂದಾಪುರ; ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಕಂಡ್ಲೂರು ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಕಲಾ ರವರು ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಂಡ್ಲೂರಿನ ಭಾರತೀಯ ಭೂಸೇನೆಯ ನಿವೃತ್ತ honorary naib ಸುಬೇದಾರ್ ಆದ ಶ್ರೀ ದಿನೇಶ್ ಶೆಟ್ಟಿ ಹಾಗೂ ಸಿದ್ಧಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಅಧ್ಯಾಪಕರಾದ ಶ್ರೀ ಶ್ರೀಧರ್ ಜೋಗಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೇನಾಧಿಕಾರಿ ದಿನೇಶ್ ಶೆಟ್ಟಿಯವರು ನಮಗೆ ಸ್ವಾತಂತ್ರ್ಯ ದೊರೆತ ಈ 79ನೇ ವರ್ಷಾಚರಣೆಯು ಕೇವಲ ಒಂದು ದಿನದ ಆಚರಣೆಯಾಗದೇ ನಿರಂತರವಾಗಬೇಕು ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ತುಳಸಿ ಎಜ್ಯಕೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಶ್ರೀಯುತ ಕೃಷ್ಣರಾಯ ಶಾನುಬಾಗ್ ರವರು ಮಾತನಾಡಿ ,ಮಕ್ಕಳನ್ನು ಈ ದೇಶದ ಜವಬ್ದಾರಿಯುತ ಸಾಹಸವಂತ ನಾಗರೀಕ ,ಪ್ರಜೆಗಳಾಗಿ ತಯಾರು ಮಾಡುವಂತ ಅಭಿಯಾನವನ್ನು ಮಾಡಬೇಕು.ಆ ನಿಟ್ಟಿನಲ್ಲಿ ಮಕ್ಕಳನ್ನು ಬೆಳೆಸಬೇಕು ಎಂದರು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ರೇಷ್ಮಪ್ರದೀಪ್ ಹಾಗೂ ಸಿದ್ಧಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಅಧ್ಯಾಪಕರಾದ ಶ್ರೀ ಶ್ರೀಧರ್ ಜೋಗಿಯವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಹಾಗೂ ಇತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕಿ ಆಶ್ರಿತಾ ಸ್ವಾಗತಿಸಿ, ಶಿಕ್ಷಕಿ ಶೃತಿ ವಂದಿಸಿದರು. ಸಹಶಿಕ್ಷಕಿಯರಾದ ರೂಪ ಬಹುಮಾನ ವಾಚಿಸಿ, ಶ್ರೀಮತಿ ಶಿಲ್ಪಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಪೋಷಕರು, ವಿದ್ಯಾರ್ಥಿಗಳು, ಹಾಗು ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.





