ಲೈಂಗಿಕ ಕಿರುಕುಳ ಪ್ರಕರಣಕ್ಕೆ ಆರೋಪಕ್ಕೆ ತುತ್ತಾದ ಎಚ್‌ ಡಿ ರೇವಣ್ಣ, ತಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧನ

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ಅವರನ್ನು
ಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರವರ ನಿವಾಸದಿಂದಲೇ ಬಂಧಿಸಿರುವ ಅಧಿಕಾರಿಗಳು ಎಸ್‌ಐಟಿ ಕಚೇರಿಗೆ.
ಕರೆದುಕೊಂಡು ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ.
ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದಾರೆ. ಇಂದು ರಾತ್ರಿ ಅಥವಾ
ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು ಅಪಹರಣಕ್ಕೀಡಾಗಿದ್ದ ಮನೆ.
ಕೆಲಸದಾಕೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಏಪ್ರಿಲ್‌ 29ರಂದು ರೇವಣ್ಣ ಅವರ ಸಂಬಂಧಿ ಸತೀಶ್‌ ಬಾಬು ಎಂಬುವರು.
ಸಂತ್ರಸ್ತ ಮಹಿಳೆಯನ್ನು ಆಕೆಯ ಮನೆಯಿಂದ ಕರೆದೊಯ್ದಿದ್ದರು. ಈ ಸಂಬಂಧ ತನಿಖೆ ತೀವ್ರಗೊಳಿಸಿದ್ದ ಎಸ್‌ಐಟಿ ಅಧಿಕಾರಿಗಳು
ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣರ ಪಿ.ಎ ರಾಜಶೇಖರ.
ಎಂಬವರ ತೋಟದ ಮನೆಯಲ್ಲಿದ್ದ ಮಹಿಳೆಯನ್ನು ರಕ್ಷಿಸಿರುವ ಎಸ್‌ಐಟಿ ಅಧಿಕಾರಿಗಳು ಆಕೆಯನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ.