ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಎಲ್ಲ ಇಲಾಖೆಗಳ ಮುಖ್ಯಸ್ಥರು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಪ್ಪದೆ ಆಚರಿಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.
ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಕೀಲರ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಜಾದಿ ಕಾ ಅಮೃತ ಮಹೋತ್ಸವ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅ.10ರಿಂದ ಅ.17ರ ವರೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಪಡೆದ ಸವಿಯ ಸಂಭ್ರಮಾಚರಣೆ ಹೆಮ್ಮೆಯ ವಿಷಯವಾಗಿದೆ. ಅಮೃತ ಮಹೋತ್ಸವಕ್ಕೆ ತನ್ನದೇ ಆದ ಮಹತ್ವವಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ರಾಷ್ಟ್ರ ಪ್ರೇಮದ ಸಂಕೇತವಾಗಿದೆ ಎಂದು ಹೇಳಿದರು.
ಶಿರಸ್ತೇದಾರ್ ಮನೋಹರ ಮಾನೆ, ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ, ಪುರಸಭೆ ಮುಖ್ಯಾಧಿಕಾರಿ ವೈ.ಆರ್.ಸತ್ಯನಾರಾಯಣ, ಪೊಲೀಸ್ ಇನ್ಸ್‍ಪೆಕ್ಟರ್ ಸಿ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ರಾಜೇಶ್, ಸುರೇಶ್, ಬಿಆರ್‍ಸಿ ಹನುಮೇಗೌq, ನವೀನ್À ಹಾಜರಿದ್ದರು.