ಸರ್ಕಾರ ನೀಡುವ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಬೇಕು; ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸರ್ಕಾರ ನೀಡುವ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ವೇಂಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಕಾಪಾಡುವ ಉದ್ದೇಶದಿಂದ ಈ ಕೇಂದ್ರವನ್ನು ತೆರೆಯಲಾಗಿದೆ. ಅದಕ್ಕಾಗಿ ಆರೋಗ್ಯ ಸಿಬ್ಬಂದಿಯೂ ಇದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ತುರ್ತು ಆರೋಗ್ಯ ಸೇವೆ ಒದಗಿಸುವಲ್ಲಿ ಈ ಆರೋಗ್ಯ ಕೇಂದ್ರ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿನ ಗರ್ಭಿಣಿಯರು, ಮಕ್ಕಳು, ವೃದ್ಧರ ಆರೋಗ್ಯ ಸುಧಾರಣೆಗೆ ಆರೋಗ್ಯ ಕೇಂದ್ರ ಪೂರಕವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ತುರ್ತು ಚಿಕಿತ್ಸೆ ಕನಸಿನ ಮಾತಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಆರೋಗ್ಯ ಸೇವೆಯನ್ನು ಜನರ ಬಳಿ ಕೊಂಡೊಯ್ಯಲಾಗಿದೆ. ಇದೊಂದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ವೈದ್ಯಾಧಿಕಾರಿ ಡಾ. ಕವಿತ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್, ಮುಖಂಡರಾದ ದೊರಸ್ವಾಮಿರೆಡ್ಡಿ, ವಿಶ್ವನಾಥರೆಡ್ಡಿ, ಅಮರನಾಥರೆಡ್ಡಿ, ಮುನಿರೆಡ್ಡಿ, ಟಿ.ವಿ.ರೆಡ್ಡಪ್ಪ, ನಾಗಮ್ಮ ಇದ್ದರು.