

ಉಡುಪಿ:ಜು.23: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ಮುನ್ಸುಚನೆ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಈ ಮೊದಲು ಕೇವಲ ಬೈಂದೂರು ತಾಲೂಕಿಗೆ ಸೀಮಿತವಾಗಿ ಘೋಷಣೆ ಮಾಡಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ನೂತನ ಆದೇಶ ಹೊರಡಿಸಿದ್ದಾರೆ.