

ಬೆಂಗಳೂರು: ರಾಜ್ಯದ ಹಲವೆಡೆ ನವೆಂಬರ್ 4ರಿಂದ 8ರವರೆಗೂ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.