ಬೆಂಗಳೂರು, ಡಿ. 9 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ರಾಜ್ಯದಲ್ಲಿ ಮಳೆ ಆರ್ಭಟ ಶುರುವಾಗಲಿ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುತ್ತಿದೆ. ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ರಾಜ್ಯ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬಿರುಗಾಳಿ ‘ಮಂಡೌಸ’ ಈ ಹೆಸರು ಸಂಯುಕ್ತ ಅರಬ ಅಮರಾತ ನೀಡಿದೆ. ಅರಬಿ ಭಾಷೆಯಲ್ಲಿ ಇದರ ಅರ್ಥ ‘ಖಜಿನಾ’ ಎಂದಾಗುತ್ತದೆ
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ. ಡಿಸೆಂಬರ್ 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮ್ಯಾಂಡಸ್ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ಅಪ್ಪಳಿಸಲಿದ್ದು, ನೆರೆಯ ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ.ರಾಜಧಾನಿ ಬೆಂಗಳೂರಿನಲ್ಲಿ ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ ೧೦ ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಕಂಡುಬರಲಿದ್ದು, ಹಿಂಗಾರು ಮಳೆ ಮತ್ತೆ ಚುರುಕು ಪಡೆಯಲಿದೆ. ಡಿಸೆಂಬರ್ ೮ ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ.ಮ್ಯಾಂಡಸ್ ಚಂಡಮಾರುತ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಭಾಗದಲ್ಲಿ ಎನ್ಡಿಆರ್‌ಎಫ್ ತಂಡ ಅಲರ್ಟ್ ಆಗಿದೆ. ದಕ್ಷಿಣ ಒಳನಾಡಿನ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೊಡಗುಮ ಚಿಕ್ಕಮಗಳೂರಿನಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಈ ದಿನದಂದು ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ 5,200 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ರಸ್ತೆ, ಕಟ್ಟಡಗಳಲ್ಲಿ ನಿಲ್ಲುವ ಮಳೆ ನೀರು ತೆರವಿಗೆ ೮೦೫ ಪಂಪ್ಸೆಟ್ಗಳನ್ನು ಸಿದ್ಧತೆಯಲ್ಲಿಡಲಾಗಿದೆ’ ಎಂದು ಅವರು ಹೇಳಿದರು.ತಮಿಳುನಾಡಿನ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಳಿಕ ಮಳೆ ತರಿಸುವ ಮೋಡಗಳು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದ್ದು ತೀವ್ರಗೊಳ್ಳಬಹುದು ಎಂದಿದೆ. ಈ ಅವಧಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ತಮಿಳುನಾಡಿನ ವಿಲ್ಲುಪುರಂ, ಚೆಂಗಲ್ಪಟ್ಟು, ಕಡಲೂರು, ಕಾಂಚೀಪುರಂ, ತಿರುವಳ್ಳೂರು, ಅರಿಯಲೂರ್, ಪೆರಂಬಲೂರ್, ಚೆನ್ನೈ, ಕಲ್ಲಕುರಿಚಿ, ಮೈಲಾಡುತುರೈ, ತಂಜಾವೂರು, ತಿರುವಾರೂರ್ ಮತ್ತು ನಾಗಪಟ್ಟಣಂ ಸೇರಿದಂತೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಹವಾಮಾನ ಇಲಾಖೆಯಿಂದ ದಕ್ಷಿಣದ 3 ರಾಜ್ಯಗಳಲ್ಲಿ ‘ಮ್ಯಾಂಡಸ್ ’ ಬಿರುಗಾಳಿ ಬರುವ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು, ಪಾಂಡಿಚರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಈ ಬಿರುಗಾಳಿ ಬರುವ ಸಾಧ್ಯತೆ ಇದೆ..
ಈ ಬಿರುಗಾಳಿಯಿಂದ ಪಂಜಾಬ, ಹರಿಯಾಣ, ಉತ್ತರಪ್ರದೇಶ, ದೆಹಲಿ ಮತ್ತು ರಾಜಸ್ಥಾನ ಈ ರಾಜ್ಯಗಳಲ್ಲಿ 3 ದಿನ ಮೋಡ ಕವಿದ ವಾತಾವರಣ ಮತ್ತು ಮಳೆ ಬೀಳುವ ಸಾಧ್ಯತೆ ಇದೆ. ಇದರಿಂದ ಉತ್ತರ ಭಾರತದಲ್ಲಿ ಚಳಿಯ ಹೊಸ ಹಂತ ಶುರುವಾಗುವ ಸಾಧ್ಯತೆ ಇದೆ.