

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆಯಲ್ಲಿ, ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವಡೆ ಮಳೆಯಾಗಿದ್ದು,
ನಿನ್ನೆ ರಾತ್ರಿ ಬಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಗೋಡೆ ಕುಸಿದು ನಾಲ್ವರ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಬಳಿ ನಡೆದಿದೆ.
ಇನ್ನು ಇಂದಿನಿಂದ 5 ದಿನ ಭಾರಿ ಮಳೆಯಾಗುವ ಸಾಧ್ಯಾತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿದ್ದು, ಇನ್ನು ಮೂರು ದಿನ ಭಾರಿ ಮಳೆಯ ಮುನ್ಸೂಚನೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
