ಬೆಂಗಳೂರು ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ ಅಲರ್ಟ್, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Heavy rain is likely to occur in the state for the next 5 days – Meteorological Department
The State Meteorological Department has predicted that there is a possibility of heavy rains in Bengaluru state for the next 5 days. It will rain till July 22. Heavy rain is likely to occur in many districts of the state and red alert has been announced for 8 districts.
Coastal, Dakshina Kannada, Uttara Kannada, Udupi districts are likely to receive heavy rains, red alert has been announced for these 4 districts today and tomorrow. Orange alert alert till July 20, heavy rain is likely to occur in Shimoga, Chikkamagaluru, Kodugu districts of southern interior and red alert has been announced today in these four districts.
Orange and yellow alert has been announced in Hassan, Kalaburgi, Bidar, Belgaum, Raichur, Yadgiri, Mysore districts due to possibility of heavy rain. The weather department has predicted that the weather will be cloudy in Bangalore and there is a possibility of moderate rain.