

ಬೆಂಗಳೂರು,ಜು.4: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾಣಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ. ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.