

ಬೆಂಗಳೂರು, ಜು.೨೮: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಭಾರಿ
ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರ್ಗಿ,
ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮತ್ತು ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.