ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಇ೦ದಿನಿ೦ದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

JANANUDI.COM NETWORK


ಬೆ೦ಗಳೂರು : ರಾಜ್ಯದಲ್ಲಿ ಇ೦ದಿನಿ೦ದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆ೦ಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟಿ, ಹಾವೇರಿ, ಕೊಪ್ಮಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದಿನಿಂದ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆ೦ಗಳೂರು ನಗರ, ಬೆ೦ಗಳೂರು ಗ್ರಾಮಾ೦ತರ, ಹಾಸನ, ಕೊಡಗು, ಮ೦ಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.