

ಬೆಂಗಳೂರು: ರಾಜ್ಯದ ಹಲವೆಡೆ ಸುರಿದ ಭಾರಿ ಆಲಿಕಲ್ಲು ಮಳೆ ಕಾಶ್ಮೀರದಂತಹ ವಾತಾವರಣ ಸೃಷ್ಟಿಸಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪು ನೀಡಿದರೂ, ಈ ಹವಾಮಾನ ವೈಪರೀತ್ಯದಿಂದಾಗಿ ಆ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಕೃಷಿ ವಲಯಕ್ಕೆ ಭಾರೀ ಹೊಡೆತ ಬಿದ್ದಿದೆ.
ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಕಳಘಟಗಿ, ಹುಬ್ಬಳ್ಳಿ, ಕುಂದಗೋಳದಲ್ಲಿ ಹಿಮ ಬಿದ್ದಂತೆ ಭಾಸವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಗದಗದಲ್ಲಿ ಸಿಡಿಲು ಬಡಿದು ರೈತ ಸಾವು, ಬೆಳಗಾವಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಇದೇ ವೇಳೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದ ಪರಿಣಾಮ ಸುಮಾರು 15 ವರ್ಷದ ಬಾಲಕ ಮೃತಪಟ್ಟ ದುರಂತ ಘಟನೆ ನಡೆದಿದ್ದು ಸಾವಿನ ಸಂಖ್ಯೆ 3 ಕ್ಕೆ ಎರಿದೆ.
ಮಾವು, ದ್ರಾಕ್ಷಿ, ದಾಳಿಂಬೆ ಮತ್ತು ಕಾಫಿ ಬೆಳೆಗಳಿಗೆ ತೀವ್ರ ಹಾನಿಯಾಗುವ ಆತಂಕ ಉಂಟಾಗಿದೆ.ರಸ್ತೆಗಳಲ್ಲಿ ಆಲಿಕಲ್ಲುಗಳು ರಾಶಿ ಬಿದ್ದಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಬೆಂಗಳೂರು, ಬೆಳಗಾವಿ, ವಿಜಯಪುರ, ವಿಜಯನಗರ, ಧಾರವಾಡ, ಚಾಮರಾಜನಗರ, ಹಾವೇರಿ ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಮಂಗಳವಾರ ಆಲಿಕಲ್ಲು ಮಳೆಯಾಗಿದ್ದು, ರಾಜ್ಯದ ಬಹುತೇಕ ಪ್ರದೇಶ ಕೆಲ ಕಾಲ ಆಲಿಕಲ್ಲಿನಿಂದ ಆವೃತವಾಗಿ ‘ಕಾಶ್ಮೀರ’ದಂತೆ ಭಾಸವಾಯಿತು.
ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ಈ ಮಳೆ ತಂಪು ನೀಡಿದರೂ, ದ್ರಾಕ್ಷಿ, ದಾಳಿಂಬೆ, ಕಾಫಿ ಮತ್ತು ಮಾವು ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಭಾರೀ ಹಾನಿ ಸಂಭವಿಸುವ ಆತಂಕ ಮೂಡಿಸಿದೆ. ಹಲವೆಡೆ ರಸ್ತೆಗಳು ಆಲಿಕಲ್ಲು ಮಳೆಯಿಂದ ಆವೃತವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆ, ಗಂಟೆಗೆ 30–40 ಕಿ.ಮೀ ವೇಗದ ಗಾಳಿ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಿದೆ.
18:03:2026 ರಿಂದ 22:03:2026 ರ ವರೆಗೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆಯಂತು ಹವಾಮಾನ ಇಲಾಖೆ ತಿಳಿಸಿದೆ.

