

ದಿನಾಂಕ ಮಾರ್ಚ್ 18ರಂದು ಕುಂದಾಪುರದ ಈಸ್ಟ್ ಬ್ಲಾಕ್ ರಸ್ತೆಯಲ್ಲಿರುವ ರಾಘವೇಂದ್ರ ಭಜನಾ ಮಂದಿರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಶ್ರೀಯುತ ಹೆಗ್ಡೆ ಸುಧೀರ್ ಖಾರ್ವಿ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಶ್ರೀಯುತ ಗಣೇಶ್ ಹೆಚ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಶ್ರೀಯುತ ಸಂತೋಷ ನಾಯ್ಕ್ ಕಾರ್ಯದರ್ಶಿಯಾಗಿ ಮತ್ತು ಗೌತಮ್ ಖಾರ್ವಿ ಕೋಶಾಧಿಕಾರಿಯಾಗಿ ಹೊಸ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಕುಂದಾಪುರದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿರುವ ಫ್ರೆಂಡ್ಸ್ ಗ್ರೂಪ್, ಮುಂಬರುವ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಕ್ರೀಡಾ ಕಳಕಳಿಯ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು.