ನ್ಯಾಯಾಲಯದ ತೀರ್ಪಿನಂತೆ ಶಾಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲೂ ಕೂಡ ಧರಿಸುವಂತ್ತಿಲ್ಲ
JANANUDI.COM NETWORK
ಬೆ೦ಗಳೂರು :ಮಾ. ೧೫: ತೀವ್ರ ಕುತೂಹಲ ಕೆರಳಿಸಿದ್ದಂತ ಹಿಜಾಬ್ ಅನುಮತಿ ( Hijab Row ) ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ತೀರ್ಪನ್ನು, ಇಂದು ಹೈಕೋರ್ಟ್ ತ್ರಿಸದಸ್ಯ ನ್ಯಾಯಪೀಠವು 10.30ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸಿದೆ. ಇದೇ ವೇಳೆ ನ್ಯಾಯಪೀಠ ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ ಅಂಥ ತಿಳಿಸಿದೆ. ಸಮವಸ್ತ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದೇ ವೇಳೆ ನ್ಯಾಯಪೀಠ ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ ವಿದ್ಯಾರ್ಥಿನಿಯರು ಶಾಲೆಗಳಲ್ಲು ಹಿಜಾಬ್ ಧರಿಸುವಂತಿಲ್ಲ ಎ೦ದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಸಮವಸ್ತೃ ಕಡ್ಡಾಯವಲ್ಲ ಎ೦ದು ವಿದ್ಯಾರ್ಥಿನಿಗಳು ವಾದಿಸುವ೦ತಿಲ್ಲ. ವಿದ್ಯಾರ್ಥಿನಿಯರು ಸಮವಸ್ತ್ರ ಸ೦ಹಿತೆ ಆದೇಶ ಪಾಲಿಸಬೇಕು. ಶಾಲೆಗಳಲ್ಲಿ ಸಮವಸ್ತ, ಧರಿಸಬೇಕು ಎ೦ದು ಆದೇಶಿಸಿದೆ.ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್. ದೀಕ್ಟಿಕ್
ಮತ್ತು ನ್ಯಾ.ಜೆ.ಎ೦. ಖಾಜಿ ಅವರನ್ನು ಒಳಗೊ೦ಡ ಪೀಠ ತೀರ್ಪು ಪ್ರಕಟಿಸಿದ್ದು,.ಹಿಜಾಬ್ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ಸವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ದಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.ಕರ೦ದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ, ಫೆಬ್ರವರಿ 25ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದಂತ ತೀರ್ಪನ್ನು, ಇಂದು ಪ್ರಕಟಿಸಿದೆ.