

ಕುಂದಾಪುರ (ಮಾ. 8) :ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ 08/3/2025 ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮಾತನಾಡಿ, ಮಕ್ಕಳಿಗೆ ಮಾರ್ಕ್ಸ್ ಒಂದೇ ಮುಖ್ಯ ಅಲ್ಲ. ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಉತ್ತಮ ಸಂಸ್ಕಾರದ ಶಿಕ್ಷಣವನ್ನು ನೀಡುವುದರ ಮೂಲಕ ಭವಿಷ್ಯದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸಬಹುದು ಎಂದರು. ಪುಟಾಣಿಗಳಾದ ಪ್ರಣವಂ, ಪೃಥ್ವಿ, ಶ್ರೀಯ, ಆಯನ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ ಭಟ್, ಸಂಸ್ಥೆಯ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ.ವಿ ನಿರೂಪಿಸಿ ವಂದಿಸಿದರು.
