

ಕುಂದಾಪುರ (ಆ. 8):ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆಗಳ ಪ್ರಾಥಮಿಕ ವಿಭಾಗದ ಮೂರನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಿಂಗ್ಸ್ ಚೆಸ್ ಅಕಾಡೆಮಿಯ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿದ ಕೆ ಸಿ ಎ ಟ್ರೋಫಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಚೆಸ್ ಪಂದ್ಯಾಟದ ಬಾಲಕರ ಮುಕ್ತ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, 9ರ ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

