ಕುಂದಾಪುರ (ಡಿ.12)ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.