

ಕುಂದಾಪುರ (ನ.28) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ,ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೀಶನ್ 2024ರಲ್ಲಿ ಭಾಗವಹಿಸಿ, ಪ್ರಥ್ವಿನ್, ಪ್ರಣವ್.ವಿ.ಶೇಟ್ ಮತ್ತು ಶ್ರೇಯಸ್.ಎಸ್.ರಾವ್ ವಿಜೇತರಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.