

ಕುಂದಾಪುರ(ಜ.18):ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿಮಿಟೆಡ್ ವತಿಯಿಂದ, ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಆಂಡ್ ಮೆಂಟಲ್ ಅರಿಥ್ಮೆಟಿಕ್ ಹಾಗೂ 16ನೇ ರಾಷ್ಟ್ರಮಟ್ಟದ ವೇದಿಕ್ ಮ್ಯಾಥ್ಸ್ 2025ರ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ. 3ನೇ ತರಗತಿಯ ವಿದ್ಯಾರ್ಥಿನಿ ಛಾಯಾ.ವಿ.ಆರ್ ದ್ವಿತೀಯ ಸ್ಥಾನವನ್ನು ಹಾಗೂ 6ನೇ ತರಗತಿಯ ವಿದ್ಯಾರ್ಥಿ ಪೃಥ್ವಿನ್ ಚತುರ್ಥ ಸ್ಥಾನವನ್ನು ಪಡೆದಿರುತ್ತಾರೆ.
ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿದರು.