

ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಈ ಪ್ರತಿಭೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.