ಕುಂದಾಪುರ, ಜು. 22: ಕುಂದಾಪುರ ವಲಯ ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕುಂದಾಪುರ ಮತ್ತು ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 21.07.22 ರಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮ ಗುರುಗುರು ವಂ| ಅಶ್ವಿನ್ ಆರಾನ್ಹಾ ವಿದ್ಯಾರ್ಥಿಗಳಿಗಳಿಗೆ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಸದಸ್ಯರಾಗಿರುವ ಶ್ರೀಯುತ ಪ್ರಭಾಕರ್ ಅವರು ಪ್ರಸ್ತಾವಿಕ ನುಡಿಯನ್ನು ಆಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾಗಿರುವ ಶ್ರೀ ದತ್ತಾತ್ರೇಯ ನಾಯಕ್ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಯನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಗಣೇಶ್ ಕೋತ್ವಾಲ್ ಕುಂದಾಪುರ ಇವರು ತಮ್ಮ ಕ್ರೀಡಾ ಸಾಧನೆಯ ಬಗ್ಗೆ ತಿಳಿಸಿ ವಿದ್ಯಾರ್ಥಿಗಳ ಮುಂದಿಟ್ಟರು. ಇವರಿಗೆ ಶಾಲೆಯ ಪರವಾಚಿ ಸನ್ಮಾನಿಸಲಾಯಿತು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾಗಿರುವ ಶಂಕರ್ ಶೆಟ್ಟಿ ,ಕುಂದಾಪುರ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಸಂತ ಮೇರಿ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ತೆರೇಜ್ ಶಾಂತಿ ಅತಿಥಿಗಳನ್ನು ಸ್ವಾಗತಿಸಿದರು ದೈಹಿಕ ಶಿಕ್ಷಕ ರತ್ನಾಕರ ನಿರೂಪಿಸಿದರು. ಸಹ ಶಿಕ್ಷಕ ಪ್ರಶಾಂತ್ ರೆಬೆರೋ ಧನ್ಯವಾದ ಸಮರ್ಪಿಸಿದರು
ಸ್ಪರ್ಧೆಯ ವಿಜೇತರುಗಳ ವಿವರ
14 ವರ್ಷದ ಬಾಲಕರ ವಿಭಾಗದಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, ಹೆಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆಯಿತು
14 ವರ್ಷದ ಬಾಲಕಿಯರ ವಿಭಾಗದಲ್ಲಿ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ದ್ವಿತೀಯ ಸ್ಥಾನ ಪಡೆಯಿತು.
17 ವರ್ಷದ ಬಾಲಕಿಯರ ವಿಭಾಗದಲ್ಲಿ ವಿ.ಕೆ.ಆರ್ ಮೆಮೊರಿಯಲ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಪಡೆಯಿತು.
17 ವರ್ಷದ ಬಾಲಕರ ವಿಭಾಗದಲ್ಲಿ ವಿ.ಕೆ.ಆರ್ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಪಡೆಯಿತು.