HOLY ROSARY CHURCH, KUNDAPUR – 450 th JUBILEE SOUVENIR 2021

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಗೆ ಉಪನಿರ್ದೇಶಕ ಎನ್. ಎಚ್. ನಾಗೂರರ ಭೇಟಿ

JANANUDI.COM NETWORK

ಕುಂದಾಪುರ ಡಿ. 22 : ಸಂತ ಜೋಸೆಫರ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಾನ್ಯ ಉಪನಿರ್ದೇಶಕರಾದ ಶ್ರೀ ಎನ್. ಎಚ್. ನಾಗೂರ ಇವರು ಭೇಟಿ ನೀಡಿದರು.(21-12-2021) ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆರೋಗ್ಯ, ಶಿಕ್ಷಣದ ಮಹತ್ವ ಹಾಗೂ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆಯ ಬಗ್ಗೆ ಮಾತನಾಡಿದರು.

ಕೋವಿಡ್ 19 ರ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು, ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ಭಯ ಪಡಬಾರದು. ಪರೀಕ್ಷೆಗೆ ಓದಲು ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದರು. ಶಾಲೆಗೆ ಬರುವಾಗ ಹಿಂದಿನ ದಿನದ ಅಭ್ಯಾಸ ಮಾಡುವುದು. ಶಿಕ್ಷಕರು ನೀಡಿದ ಮನೆಗೆಲಸ ಆ ದಿನವೇ ಮಾಡಬೇಕು. ತಂದೆತಾಯಿಗಳು ಪ್ರತ್ಯಕ್ಷ ದೇವರು. ಮಕ್ಕಳಾದ ನೀವು ಅವರನ್ನು ಗೌರವಿಸಬೇಕು. ಹಾಗೆಯೇ ಶಿಕ್ಷಕರನ್ನು ಗೌರವದಿಂದ ಕಾಣಬೇಕೆಂದು ತಿಳಿಸಿದರು.

ಕುಂದಾಪುರ ಕ್ಷೇತ್ರ ಶಿಕ್ಷಣ ಅಧಿಕಾರಿ ಕಚೇರಿ ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಶ್ರೀ ದತ್ತಾತ್ರೇಯ ನಾಯ್ಕ, ಸಮೂಹ ಸಂಪನ್ಮೂಲ ಸಮನ್ವಯ ಅಧಿಕಾರಿ ಶ್ರೀ ಸದಾನಂದ ಬೈಂದೂರು, ಪ್ರೌಢಶಾಲಾ ಸಹಾಯಕ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಇವರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ರಸ್ತೆ ಬದಿ ಮತ್ತು ತಳ್ಳುವ ಗಾಡಿ ವ್ಯಾಪಾರಸ್ತರ,ಇಲಾಖೆ ಮಾಡಿದ ಸರ್ವೆ ತಪ್ಪಾಗಿದೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ: ರಸ್ತೆ ಬದಿ ಮತ್ತು ತಳ್ಳುವ ಗಾಡಿ ಮೇಲೆ ಇಟ್ಟುಕೊಂಡು ವ್ಯಾಪಾರ ಮಾಡುತ್ತಾರೆ. ಅವರ ಸರ್ವೇ ಮಾಡಿರುವುದು ಇಲಾಖೆ ತಪ್ಪಾಗಿದೆ. ಸರ್ಕಾರ ಕುಲಂಕುಶವಾಗಿ ಪರಿಶೀಲನೆ ನಡೆಸಿಲ್ಲ. ಇನ್ನಾದರು ಸರಿಯಾದ ರೀತಿ ಸರ್ವೇ ಮಾಡಿ ಅರ್ಹರನ್ನು ಗುರುತಿಸಿ ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಒತ್ತಾಯಿಸಿದರು.
ಬೆಳಗಾವಿಯ ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಗೋವಿಂದರಾಜು ಅವರು, ರಸ್ತೆ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದರೆ ಸರ್ಕಾರ ಸಮರ್ಪಕವಾದ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಬಡವರ ಬಂದು ಕಾರ್ಯಕ್ರಮವನ್ನು ಯಾಕೆ ಸ್ಪಷ್ಟ ಉತ್ತರ ನೀಡಿಲ್ಲ. ಬೀದಿ ಬದಿ ವ್ಯಾಪಾರಿಗಳ ಸರ್ವೇ ಕಾರ್ಯ ಸಮರ್ಪಕವಾಗಿ ಇಲ್ಲ ಎಂದು ದೂರಿದರು.
ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಸಣ್ಣ ವ್ಯಾಪಾರಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಸರ್ಕಾರ ಸೌಕರ್ಯ ಕಲ್ಪಿಸಲು ಬದ್ಧವಾಗಿದೆ. ರಾಜ್ಯದಲ್ಲಿ ಬೀದಿ ವ್ಯಾಪಾರಿಗಳಿಗಾಗಿ 43 ಮಾರುಕಟ್ಟೆಗಳನ್ನು ನಿರ್ಮಿಸಲು ಕ್ರಮಕೈಗೊಂಡಿದ್ದು, ಅದು ಪ್ರಗತಿಯಲ್ಲಿದೆ. ಜೊತೆಗೆ ಕೌಶಲ್ಯ ತರಬೇತಿ ನೀಡಲಾಗಿದೆ. 15 ಕೋಟಿ ವೆಚ್ಚದಲ್ಲಿ ಪ್ರಗತಿ ಕಾರ್ಯ ನಡೆಯುತ್ತಿದೆ. ಸ್ಥಳೀಯ, ನಗರಮಟ್ಟದಲ್ಲಿ ವ್ಯವಸ್ಥಿತವಾಗಿ ಮಾರುಕಟ್ಟೆ ನಡೆಯುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಸಬಲೀಕರಣ ಆಗುತ್ತಿರುವುದು ಕಾಣಲಾಗುತ್ತಿದೆ ಎಂದು ಹೇಳಿದರು.
ಪ್ರತಿ ವ್ಯಾಪಾರಿಗೂ ಸೌಕರ್ಯ ಕಲ್ಪಿಸಲು 8 ಯೋಜನೆಗಳನ್ನು ವಿಸ್ತರಿಸಲಾಗಿದೆ. ಬ್ಯಾಂಕಿನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಯಾವ ರೀತಿ ಸಾಲ ಸಿಗುತ್ತಿತ್ತು ಎಂಬುದು ತಿಳಿಸಿದೆ. ಹಿಂದೆ ವ್ಯಾಪಾರಿಗಳು ಖಾಸಗಿ ಬಡ್ಡಿ ಲೇವಾದೇವಿದಾರರಿಂದ ಸಾಲ ಪಡೆಯುತ್ತಿದ್ದರು. ಅವರು ವ್ಯಾಪಾರ ಮಾಡಿದ ಹಣದಲ್ಲಿ ಸಂಜೆ ಬಡ್ಡಿ ಕಟ್ಟಬೇಕಾಗಿತ್ತು. ಆದರೆ ಈಗ ಉತ್ತಮವಾಗಿ ಬಾಳಿ ಬದುಕಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, 10 ಸಾವಿರ ಸಾಲ ಕೊಟ್ಟಿರುವುದು ಶೇ.7ರಷ್ಟು ಬಡ್ಡಿ ದರದಲ್ಲಿ. ಇತರೆ ಚಟುವಟಿಕೆ ನಡೆಸುತ್ತಿರುವವರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಅದೇ ರೀತಿ ಇವರಿಗೂ ಬಡ್ಡಿರಹಿತ ಸಾಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರಿಗಳ ಹಿತ ರಕ್ಷಣೆಗಾಗಿ ಸರ್ಕಾರ ಕೈಗೊಂಡಿರುವ ಬಗ್ಗೆ ಸರ್ಕಾರಿ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬಡವರ ಬಂದು ಯೋಜನೆಯಡಿ ಸಾಲ ಕಲ್ಪಿಸಲಾಗುತ್ತಿತ್ತು. ಅದನ್ನು ಮುಂದುವರೆಸಿದೀಯೆ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ, ರಾಜ್ಯ ಸರ್ಕಾರದಿಂದ 1,60,000 ಮಂದಿಗೆ ತಲಾ 2000 ರೂ ನೀಡಲಾಗಿದೆ. ಇದರ ಜೊತೆಗೆ ಮಾರುಕಟ್ಟೆ ಅಭಿವೃದ್ಧಿ ಜೊತೆಗೆ ಗುರುತಿನ ಚೀಟಿ, ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಇನ್ನು 8 ಕಾರ್ಯಕ್ರಮಗಳನ್ನು ವ್ಯಾಪಾರಿಗಳ ಅಭಿವೃದ್ಧಿ ವಿಸ್ತರಿಸಲಾಗುತ್ತಿದೆ. ಆತ್ಮ ನಿರ್ಮಲ ನಿಧಿಯಿಂದ 10 ರಿಂದ 20 ಸಾವಿರತನಕ ಸಾಲ ನೀಡಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮಾತನಾಡಿ, ಬಡ್ಡಿ ದರದಲ್ಲಿ ಎಂತಹವರಿಗೂ ಸಾಲ ದೊರೆಯುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸುಲಭದ ರೀತಿಯಲ್ಲಿ ದೊರೆಯುವುದಿಲ್ಲ. ಈ ವ್ಯಾಪಾರಿಗಳು ಯಾರ ಹಂಗು ಇಲ್ಲದೆ ಸ್ವಾವಲಂಭಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಸರ್ಕಾರ ಅವರ ಹಿತಕಾಯಲಯಲು ಮುಂದಾಗಬೇಕು ಎಂದು ಆಗ್ರಹಿಸಿದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಹಿರಿಯ ಸಾಹಿತಿ ಬೆಳ್ಮಣ್ಣು ಅನುಬೆಳ್ಳೆ ಅವರಿಗೆ ಸನ್ಮಾನ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಯುವ ಸಾಹಿತಿ ಬೋರುಗುಡ್ಡೆ ಇಂದುಚೇತನ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ : ಡಿಡಿಪಿಐ ರೇವಣಸಿದ್ಧಪ್ಪ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ ಡಿಸೆಂಬರ್ 21 : ಕೇವಲ ತುರ್ತು ಸಂದರ್ಭದಲ್ಲಿ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಮಾನವೀಯ ಗುಣಗಳನ್ನು ಅಳವಡಿಕೊಳ್ಳುವುದು ಒಳಿತು. ಈ ಮೂಲಕ ಉತ್ತಮ ಉದಾತ್ತಾ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶರಾದ ಎಂ. ರೇವಣಸಿದ್ದಪ್ಪ ತಿಳಿಸಿದರು.
ನಗರದ ಭಾರತೀಯ ರೆಡ್ ಕ್ರಾಸ್ ಕಾರ್ಯಾಲಯದಲ್ಲಿ ಇಂದು ಸಂಸ್ಥೆಯ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಉಚಿತ ದಿನಸಿ ಕಿಟ್ ಗಳನ್ನು ಸಾರ್ವಜನಿಕರಿಗೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತಾನಾಡುತ್ತಿದ್ದರು
ಮಾನವ ಜನ್ಮ ದೊಡ್ಡದು. ಇದರ ಜೊತೆಗೆ ಯಾವುದೇ ಪಠ್ಯ ಸಹಪಠ್ಯದಲ್ಲಿರುವ ಮಾನವೀಯ ಮೌಲ್ಯಗಳನ್ನು ಹುಟ್ಟು ಸಾವಿನ ನಡುವೆ ಎಲ್ಲಾ ಕಡೆಗಳಲ್ಲೂ ಅಳವಡಿಸಿಕೊಳ್ಳುವುದರಿಂದ ಜೀವನ ಸಾರ್ಥಕ ಸೇವೆ ಮಾಡಿದ ಅಬನುಭವ ಆಗುತ್ತದೆ ಎಂದರು
ಆಕಸ್ಮಿಕ ಅವಘಡಗಳು ಆರೋಗ್ಯ ವೈಯಕ್ತಿಕ ಸಮಸ್ಯೆಗಳು ಎದುರಾದಾಗ ಹೆಚ್ಚರ ವಹಿಸುವುದಕ್ಕಿಂತ ಆ ಸಂದರ್ಭದ ಪರಿಹಾರೋಪಾಯಗಳನ್ನು ನೀಡುವುದು ಮಾನವೀಯ ಸೇವೆ ಎನ್ನಿಸಿಕೊಳ್ಳುತ್ತದೆ. ಈ ದಿಸೆಯಲ್ಲಿ ಮಾನವ ಧರ್ಮಕ್ಕಿಂತ ಶ್ರೇಷ್ಠ ಧರ್ಮ ಬೇರೊಂದು ಇಲ್ಲ ಎಂದರು.
ಸಮಾರಂಭ ಅಧ್ಯಕ್ಷತೆ ವಹಿಸಿದ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಭಾಪತಿ ಎನ್ ಗೋಪಾಲಕೃಷ್ಣ ಗೌಡ ಮಾತಾನಾಡಿ ಸಮಾಜ ಮತ್ತು ಸಮುದಾಯದ ಸೇವೆಗೆ ಯಾವುದೇ ಜಾತಿಯಿಲ್ಲ ಧರ್ಮವಿಲ್ಲ ರಾಜಕೀಯವಿಲ್ಲ ಹಾಗಾಗಿ ಸೇವೆಯೇ ನಮ್ಮ ಮೂಲ ಮಂತ್ರವಾಗಬೇಕು. ಸಂಸ್ಥೆಯ ಶತಮಾನೋತ್ಸವ ಸಮಾರಂಭದಲ್ಲಿ ಫಲಾನುಭವಿಗಳನ್ನು ಗುರುತಿಸಿ ಆಹಾರ ಕಿಟ್ ಗಳನ್ನು ನೀಡಲಾಗುತ್ತದ್ದು ಇದರ ಸದುಪಯೋಗ ಆಗಬೇಕು. ಆರೋಗ್ಯ ಸಮಾಜ ನಿರ್ಮಾಣ ಆಗಬೇಕು ಎಂದರು.
ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಆಡಳಿತ ಮಂಡಳಿ ಸದಸ್ಯ ಎಸ್ ಸಿ ವೆಂಕಟಕೃಷ್ಣಪ್ಪ, ಉಪಸಭಾಪತಿ ಆರ್ ಶ್ರೀನಿವಾಸನ್, ಕಾರ್ಯದರ್ಶಿ ನಂದೀಶ್ ಕುಮಾರ್, ಕೋಶಾಧ್ಯಕ್ಷ ಜಿ. ಶ್ರೀನಿವಾಸ್, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಶರಣಪ್ಪ ಗಬ್ಬೂರು, ನಿರ್ದೇಶಕರುಗಳಾದ ನಾಗೇಂದ್ರ್ ಪ್ರಸಾದ್, ಮುರುಳೀಧರ, ಸಾದತ್ ನವೀದ್, ಶ್ರೀರಾಮ್ ರೆಡ್ಡಿ, ವೆಂಕಟೇಶಪ್ಪ, ಸೀನಪ್ಪ, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು
.

ಉದ್ಯಾವರ : ಸರ್ವಧರ್ಮೀಯರ ಸಹಕಾರದೊಂದಿಗೆ ಸೌಹಾರ್ದ ಕ್ರಿಸ್ ಮಸ್ ಆಚರಣೆ

JANANUDI.COM NETWORK

ಉದ್ಯಾವರ ಡಿ.21 : ಧ್ವನಿ ಇದ್ದವರು ಮತ್ತು ಶಕ್ತಿ ಉಳ್ಳವರು ಮಾತ್ರ ಸಮಾಜದಲ್ಲಿ ಬೆಳೆಯುವಂತಾಗಿದೆ. ದೀನ ದಲಿತರು, ಬಡವರು, ನಿರ್ಗತಿಕರು ಮತ್ತು ಇತರರೆಲ್ಲರೂ ಬದಿಗೆ ಸರಿಯಲ್ಪಡುತ್ತಿದ್ದಾರೆ. ಈ ಪ್ರಪಂಚ ನಮ್ಮದು. ನಿಮ್ಮದಲ್ಲ. ನಾನೇ ಶ್ರೇಷ್ಠ, ನೀನು ಕನಿಷ್ಠ. ನಾನು ಶ್ರೀಮಂತ, ನೀನು ಬಡವ. ಇದೆಲ್ಲ ನನ್ನದು. ನಿನಗಿಲ್ಲ ಇದರಲ್ಲಿ ಪಾಲು. ಇಂತಹ ವ್ಯವಸ್ಥೆ ವಿಶ್ವದಲ್ಲಿ ಮಾತ್ರವಲ್ಲದೆ ನಮ್ಮ ರಾಷ್ಟ್ರದಲ್ಲೂ ಕಾಣ ಸಿಗುತ್ತಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಫಾ. ಚೇತನ್ ಲೋಬೊ ತಿಳಿಸಿದರು.
ಉದ್ಯಾವರ ಸೌಹಾರ್ದ ಸಮಿತಿ ನೇತೃತ್ವದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಸರ್ವಧರ್ಮೀಯರ ಸಹಕಾರದೊಂದಿಗೆ ನಡೆದ ಸೌಹಾರ್ದ ಕ್ರಿಸ್ ಮಸ್ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
‘ಪ್ರಸ್ತುತ ವರ್ಷದ ಕ್ರಿಸ್ ಮಸ್ ಅನ್ನು 3 ಅಂಶಗಳೊಂದಿಗೆ ಆಚರಿಸೋಣ. ನಾವೆಲ್ಲ ಸಂತೋಷದಿಂದಿರುವ ಜೊತೆಗೆ ಇತರರನ್ನು ಸಂತೋಷ ಪಡಿಸೋಣ. ಸಮಾಜಕ್ಕೆ ಒಳ್ಳೆಯದನ್ನು ಮಾಡುವವರಿಗೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸೋಣ. ನಾವೆಲ್ಲರೂ ತೆಗೆದುಕೊಳ್ಳುವ ಕೈ ಗಳಾಗದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಕೈಗಳಾಗೋಣ’ ಎಂದರು.
ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿಯ ಉಪನ್ಯಾಸಕರಾಗಿರುವ ಪ್ರೊ. ವಿಣೇಶ್ ಅಮೀನ್ ಸಾಂತೂರು ಮಾತನಾಡಿ, ಯಾವುದೇ ಒಳ್ಳೆಯ ಕೆಲಸಗಳು ಮಾಡುತ್ತಿರುವಾಗ ಜಾತಿ ಧರ್ಮ ಅಡ್ಡಬರಬಾರದು. ಮಾಧ್ಯಮಗಳು ಒಳ್ಳೆಯ ಕೆಲಸಗಳಿಗೆ ಹೆಚ್ಚು ಪ್ರಚಾರ ನೀಡಬೇಕೆ ವಿನಾ ಕೆಟ್ಟ ಕೆಲಸಗಳಿಗಲ್ಲ. ಇಂದಿನ ಸಮಾಜ ಮನಸ್ಸು ಮನಸ್ಸು ಬೆಸೆಯುವ ಸಮಾಜವಾಗಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಕುಲಪತಿ, ಸ್ಥಳೀಯ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ. ಲೋಬೊ ಮಾತನಾಡುತ್ತಾ, ಕಳೆದೆರಡು ವರ್ಷಗಳಿಂದ ಕೋವಿಡ್ ಅಟ್ಟಹಾಸದಿಂದ ಜನರು ಸಂಕಷ್ಟದಲ್ಲಿದ್ದಾರೆ. ಮಾರಕ ಸೋಂಕಿಗೆ ಲಕ್ಷಾಂತರ ಜನರು ಬಲಿಯಾಗಿದ್ದಾರೆ. ಪ್ರಸ್ತುತ ವರ್ಷದ ಕ್ರಿಸ್ ಮಸ್ಸನ್ನು ಏಸುಕ್ರಿಸ್ತರ ಮಾತಿನಂತೆ ನಾವೆಲ್ಲರೂ ಸಂಕಷ್ಟದಲ್ಲಿರುವ ಸಹೋದರ ಸಹೋದರಿಯರ ಬಾಳಿಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾಗುವ ನಕ್ಷತ್ರಗಳಾಗೋಣ ಎಂದರು.
ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಸಮಾಜ ಸೇವಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌಹಾರ್ದ ಸಮಿತಿ ಉದ್ಯಾವರದ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ವಹಿಸಿದ್ದರು. ವೇದಿಕೆಯಲ್ಲಿ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಸೌಹಾರ್ದ ಸಮಿತಿ ಕಾರ್ಯದರ್ಶಿ ಆಬಿದ್ ಅಲಿ ಸ್ವಾಗತಿಸಿದರೆ, ಕೋಶಾಧಿಕಾರಿ ಪ್ರತಾಪ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೊ ಮತ್ತು ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

ವರದಿ : ಕೆ.ಜಿ.ವೈದ್ಯ,ಕುಂದಾಪುರ

ವಡ್ಡರ್ಸೆ ಈ ನಾಡು ಕಂಡ ಶ್ರೇಷ್ಠ ಪತ್ರಕರ್ತ – ಚಂದ್ರಶೇಖರ್ ಹೆಗ್ಡೆ

ಕುಂದಾಪುರ:ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳ ಹೇಳಿದರು.
ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ವಡ್ಡರ್ಸೆಯವರ ಮನೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.
ರಘುರಾಮ ಶೆಟ್ಟರ ಹುಟ್ಟೂರಿನ ಮನೆಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಂಘಟಿಸುತ್ತಾ ಬಂದಿರುವುದು ಶ್ಲಾಘನೀಯ. ನಿಮ್ಮ ಕಾರ್ಯಕ್ರಮಕ್ಕೆ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿರತಂತರ ಸಹಕಾರ ನೀಡಲಿದೆ ಎಂದರು.
ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಅತ್ಯುತ್ತಮವಾದ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲಾ ಸಂಘಟನೆಗಳಿಗೆ ಇದು ಆದರ್ಶವಾಗಿದೆ. ನಿಮ್ಮ ಒಗ್ಗಟ್ಟು ಇದೇ ರೀತಿ ಮುಂದುವರಿಯಲಿ ಎಂದು ಹಾರೈಸಿದರು.
ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್. ಶೆಣೈ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಡಿ. 26ರಂದು ಅಪರಾಹ್ನ 3.30ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನಿಸುವರು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದರು.
ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಹಾಗೂ ಮುಖ್ಯ ಶಿಕ್ಷಕ ಕೊತ್ತಾಡಿ ಸಂತೋಷ ಶೆಟ್ಟಿ, ಜಿಲ್ಲಾ ಸಂಘದ ಸದಸ್ಯ ಗಣೇಶ್ ಸಾಯಿಬ್ರಕಟ್ಟೆ, ಪತ್ರಕರ್ತ ಪ್ರವೀಣ್ ಮುದ್ದೂರ್, ಪ್ರವೀಣ್ ಬ್ರಹ್ಮಾವರ, ಹರೀಶ್ ಕಿರಣ್ ತುಂಗ ಉಪಸ್ಥಿತರಿದ್ದರು.
ಸಂಘದ ಜತೆ ಕಾರ್ಯದರ್ಶಿ ಕೆ.ಜಿ. ವೈದ್ಯ ಸ್ವಾಗತಿಸಿ, ಕಾರ್ಯಕ್ರಮದ ಸಂಚಾಲಕ ವಸಂತ್ ಗಿಳಿಯಾರು ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಪ್ರತಕರ್ತರ ಸಂಘದ ಪ್ರಭಾರ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ವಂದಿಸಿದರು.

ಕುಂದಾಪುರ: ಪೋಲಿಸ್ ರಿಂದ ತಪ್ಪಿಸಿ ಕೊಳ್ಳುವ ಧಾವಂತ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಪರಾರಿಯಾದ ಸ್ಕೂಟರ್ ಸವಾರರು

ವರದಿ : ಮಝರ್, ಕುಂದಾಪುರ

ಕುಂದಾಪುರ:ಹೆಲ್ಮೆಟ್ ಹಾಕಿ ಕೊಳ್ಳದೆ ರಾಂಗ್ ಸೈಡಿನಿಂದ ಬರುತ್ತಿದ್ದ ಸ್ಕೂಟರ್ ಸವಾರರು ಎದುರಿಗೆ ಬಂದ ಟ್ರಾಫಿಕ್ ಇಂಟರ್ ಸೆಪ್ಟರ್ ಪೊಲೀಸ್ ವಾಹನವನ್ನು ಕಂಡು ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಹೊಸಬಸ್ ನಿಲ್ದಾಣ ಸಮೀಪ ಶನಿವಾರ ಮಧ್ಯಾಹ್ನ 1.15ರ ಆಸುಪಾಸಿಗೆ ಈ ಘಟನೆಯು ಜರಗಿದ್ದು, ಏಕ ಮುಖ ಸಂಚಾರವಾಗಿರುವ ಮುಖ್ಯರಸ್ತೆಯಲ್ಲಿ ವಿರುಧ್ಧ ದಿಕ್ಕಿನಿಂದ ಹೆಲ್ಮೆಟ್ ಧರಿಸದೇ ಬರುತ್ತಿದ್ದ ಸ್ಕೂಟರ್ ಸವಾರರನ್ನು ಕಂಡು ಟ್ರಾಫಿಕ್ ಇಂಟರ್ ಸೆಪ್ಟರ್ ನಲ್ಲಿ ಸಾಗುತ್ತಿದ್ದ ಪೊಲೀಸರು ಸ್ಕೂಟರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ . ಆದರೆ ಪೊಲೀಸರನ್ನು ಕಂಡೊಡನೆ ಸ್ಕೂಟರ್ ವೇಗವನ್ನು ಹೆಚ್ಚಿಸಿದ ಸವಾರ ತಪ್ಪಿಸಿಕೊಳ್ಳುವ ಭರ ದಲ್ಲಿ ಎದುರಿನಿಂದ ಸಾಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ರಾಮ ಮಂದಿರ ರಸ್ತೆಯ ಮೂಲಕ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ರಸ್ತೆಗೆ ಉರುಳಿದ ವಿದ್ಯಾರ್ಥಿನಿ ನಡೆದ ಘಟನೆಯಿಂದ ಬೆಚ್ಚಿ ಬಿದ್ದಿದ್ದು ಸುದೈವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ. ಟ್ರಾಫಿಕ್ ಪೊಲೀಸರ ಕಟ್ಟು ನಿಟ್ಟಿನ ಕ್ರಮದ ನಡುವೆಯೂ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವ ಪಡ್ಡೆ ಹುಡುಗರ ಸಂಖ್ಯೆ ಹೆಚ್ಚಾಗುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪರಾರಿಯಾಗಿರುವ ಸ್ಕೂಟರ್ ಸವಾರರು ಪರಾರಿಯಾಗಲು ಬಳಸಿದ ಮಾರ್ಗದಲ್ಲಿ ಆಳವಡಿಸಲಾಗಿರುವ ಅಷ್ಟೂ ಸಿಸಿ ಕೆಮರಾ ಗಳ ಫೂಟೇಜ್ ಗಳನ್ನು ಪೊಲೀಸರು ಕಲೆ ಹಾಕಿದ್ದು ಸವಾರರ ಗುರ್ತು ಪತ್ತೆಯಲ್ಲಿ ತೊಡಗಿದ್ದಾರೆನ್ನಲಾಗಿದೆ.

ಮತಾ0ತರ ನಿಷೇಧ ಮಸೂದೆ ಮಂಡನೆಗೆ ಸ0ಪುಟ ಅನುಮೋದನೆ: ನಾಳೆ ಸದನದಲ್ಲಿ ಮಂಡನೆಯಾಗುವ ಸಂಭವ

JANANUDI.COM NETWORK

http://www.dreamstime.com/stock-photo-religious-icons-image27336450

ಬೆಳಗಾವಿ:ಡಿ.20: ರಾಜ್ಯಾದ್ಯ0ತ ಭಾರೀ ಚರ್ಚೆಗೆ ಮತ್ತು ವಿವಾದಾಸ್ಪದಕ್ಕೆ ಒಳಗಾಗಿದ್ದ ಮತಾ0ತರ ನಿಷೇಧ ಮಸೂದೆ ಮಂಡನೆಗೆ ಇ0ದು ಸಚಿವ ಸ0ಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ಸಚಿವ ಸಂಪುಟದ ಕಲಾಪದಲ್ಲಿ ಈ ಮತಾ0ತರ ನಿಷೇಧ ಮಸೂದೆ ಮಂಡನೆಯಾಗುವ ಸಂಭವ ಇದೆ.
ಕರಡು ವಿಧೇಯಕದಲ್ಲಿನ ಕೆಲವು ಬದಲಾವಣೆಗಳೊಂದಿಗೆ ನಾಳ ಸದನದಲ್ಲಿ ಮಂಡನೆಯಾಗಲಿದೆ. ಇಂದಿನ ಸಂಪುಟ ಸಭೆ ಮುಕ್ತಾಯವಾಗಿದ್ದು. ಸದನದಲ್ಲಿ ಮತಾ0ತರ ನಿಷೇಧ ವಿಧೇಯಕ ಮ0ಡನೆಗೆ ಸ0ಪುಟ ಅನುಮೋದನೆ ನೀಡಿದೆ.
ರಾಜ್ಯ ಸರ್ಕಾರವು ಪುಸ್ತಾಪಿಸಿರುವ ಮತಾ0ತರ ನಿμÉೀಧ ಮಸೂದೆಯಲ್ಲಿ ಈ ಕೆಳಕ0ಡ ಪ್ರಮುಖ ವಿಷಯಗಳಿವೆ
1) ಬಲವ0ತದ ಮತಾ0ತರ ಶಿಕ್ಷಾರ್ಹ ಎ0ಬ ಪ್ರಕಾರವೇ ವಿಧೇಯಕದಲ್ಲಿ ಇದೆ.
2 ಯಾವುದೇ ವ್ಯಕ್ತಿ ಅಥವಾ ಸಮುದಾಯ ಬಲವಂತದ ಮತಾ0ತರ ಮಾಡುವಂತಿಲ್ಲ
3 ವ್ಯಕ್ತಿ ಮತಾ0ತರ ಹೊ0ದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿ0ಗಳ ಮೊದಲು ಅರ್ಜಿ ಸಲ್ಲಿಸಬೇಕು
4 ಮತಾ0ತರ ಪ್ರಕ್ರಿಯೆ ನಡೆಸಬೇಕಾದರೂ ಸಕ್ಷಮ ಪ್ರಾಧಿಕಾರದ ಮುಂದೆ 2 ತಿ0ಗಳ ಮೊದಲು ಅರ್ಜಿ ಸಲ್ಲಿಸಬೇಕು
5 ಅರ್ಜಿ ಸಲ್ಲಿಸಿದ ವ್ಯಕ್ತಿ ತನ್ನ ಇಚ್ಚೆಗೆ ಅನುಗುಣವಾಗಿ ನೀಡಿರುವ ಅರ್ಜಿ ಹಿ0ಪಡೆಯಲು ಸ್ವತಂತ್ರನಾಗಿರುತ್ತಾನೆ
6 ಮತಾ0ತರ ಆಗಲು ಬಯಸುವ ವ್ಯಕ್ತಿಯ ಖಾಸಗಿತನ ಕಾಪಾಡಲು ಮತ್ತು ಧಾರ್ಮಿಕ ಹಕ್ಕನ್ನು ಕಾಪಾಡಲು ಮತಾ0ತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ
7) ಮತಾ0ತರ ಪ್ರಕ್ರಿಯೆಯೊಳಗೆ ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ತೊಡಗುವಂತೆ ಮಾಡಲು ಅವಕಾಶವಿಲ್ಲ
8 ಬಲವ0ತದ ಮತಾ0ತರ ಮಾಡುವ ಅಥವಾ ಮತಾ0ತರಕ್ಕೆ ಪ್ರಚೋದನೆ ನೀಡುವ ವ್ಯಕ್ತಿಯನ್ನು ಬಂಧಿಸಲು ಅವಕಾಶ
9 ಬಂಧಿತನಾಗುವ ವ್ಯಕ್ತಿಗೆ ಜಾಮೀನು ಪಡೆಯಲು ಅವಕಾಶ ಇಲ್ಲದಂತೆ, ಜಾಮೀನು ರಹಿತ ಪ್ರಕರಣ ಎ0ದು ಪರಿಗಣಿಸುವುದು
10) ಮತಾ0ತರ ಪ್ರಕ್ರಿಯೆ ಯಾವುದೇ ಧಾರ್ಮಿಕ ಕಟ್ಟಡಗಳು, ಪ್ರಾರ್ಥನಾ ಕೇಂದ್ರಗಳಲ್ಲಿ ಮಾಡುವಂತಿಲ್ಲ
11) ಮತಾ0ತರ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆಯುತ್ತಿದ್ದಲ್ಲಿ ನಿಗದಿತ ಪ್ರಕ್ರಿಯೆಯನ್ನು ತಟಸ್ಥ ಪ್ರದೇಶದಲ್ಲಿ ಮಾಡುವುದು ಕಡ್ಡಾಯ
 

ಬಾಲಕಾರ್ಮಿಕ, ಕಿಶೋರಕಾರ್ಮಿಕ ಪದ್ಧತಿ ಕುರಿತು ಮನ ಮುಟ್ಟುವಂತೆ ಅರಿವು ಮೂಡಿಸಿ: ಡಿ.ಸಿ. ಕೂರ್ಮಾರಾವ್ ಎಂ.

JANANUDI.COM NETWORK


ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿμÉೀಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡುತ್ತಾ ಮಾತನಾಡಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿನ ಹೆತ್ತವರಿಗೆ ಮನ ಮುಟ್ಟುವಂತೆ ಬೀದಿ ನಾಟಕಗಳ ಮೂಲಕ ಅರಿವು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಮತ್ತು ಆಟೋ ಪ್ರಚಾರದ ಮೂಲಕ ಹಾಗೂ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಾದ್ಯಂತ 10 ದಿನ ನಡೆಸಲಾಗುವ ಈ ಆಟೋ ಪ್ರಚಾರ ಕಾರ್ಯಕ್ರಮವು ಸಾಧ್ಯವಾದಷ್ಟು ಎಲ್ಲಾ ಕಾಲೋನಿಗಳಿಗೆ ತಲುಪುವಂತೆ ಯೋಜನೆ ರೂಪಿಸ ಬೇಕು ಎಂದು ತಿಳಿಸಿದರು.