HOLY ROSARY CHURCH, KUNDAPUR – 450 th JUBILEE SOUVENIR 2021

ಶ್ರೀನಿವಾಸಪುರ: ಆಜ್ಞೇಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕೈ ಬಲಪಡಿಸಬೇಕು: ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಆಜ್ಞೇಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಮನವಿ ಮಾಡಿದರು.
  ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ ಅವರ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.   ರಾಜ್ಯ ಬಿಜೆಪಿ ಕಾರ್ಯದರ್ಶಿ ಕೇಶವ ಪ್ರಸಾದ್‌, ಜಿಲ್ಲಾ ಬಿಜೆಪಿ ಪ್ರಭಾರಿ ಪದ್ಮ ಶಿವಶಂಕರ್‌ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಬಗ್ಗೆ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.  ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕ್‌ ರೆಡ್ಡಿ, ಉಪಾಧ್ಯಕ್ಷ ಶಿವಶಂಕರೇಗೌಡ, ಅಭ್ಯರ್ಥಿ ಚಿದಾನಂದ ಎಂ.ಗೌಡ, ಮುಖಂಡರಾದ ಜಯರಾಮರೆಡ್ಡಿ, ನಾಗರಾಜ್‌, ರಮೇಶ್‌ ಇದ್ದರು.

ಜನರು ಕೊರೊನಾ ಹರಡದಂತೆ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವೈಯಕ್ತಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು :ಶ್ರೀನಿವಾಸಪುರ ತಹಶೀಲ್ದಾರ್‌ ಎಸ್.ಎಂ.ಶ್ರೀನಿವಾಸ್

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಜನರು ಕೊರೊನಾ ಹರಡದಂತೆ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವೈಯಕ್ತಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಹಶೀಲ್ದಾರ್‌ ಎಸ್.ಎಂ.ಶ್ರೀನಿವಾಸ್ ಹೇಳಿದರು.
  ಪಟ್ಟಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಜನ ದಟ್ಟಣೆ ಇರುವು ಕಡೆ ಅಂತರ ಪಾಲಿಸಬೇಕು. ಮನೆಯಿಂದ ಹೊರಬಂದ ಕೂಡಲೆ ಮಾಸ್ಕ್‌ ಧರಿಸಬೇಕು. ಸಾಬೂನಿನಿಂದ ಕೈ ತೊಳೆಯಬೇಕು. ಸ್ಯಾನಿಟೈಸರ್‌ ಬಳಸಬೇಕು ಎಂದು ಹೇಳಿದರು.  ಪುರಸಭೆ ಮುಖ್ಯಾಧಿಕಾರಿ ವಿ.ಮೋನಹ್‌ ಕುಮಾರ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಕೊರೊನಾ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾತನಾಡಿದರು.  ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲಾಯಿತು.  ತಾಲ್ಲೂಕು ವೈದ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಬಿಆರ್‌ಸಿ ವಸಂತ, ಸಿಆರ್‌ಪಿ ಅಮರನಾಥ್‌ ಅಧಿಕಾರಿಗಳಾದ ಕೆ.ಜಿ.ರಮೇಶ್‌, ಶೇಖರ್‌ ರೆಡ್ಡಿ, ನಾಗೇಶ್‌, ಜಿ.ವಿ.ಚಂದ್ರಪ್ಪ, ನಾರಾಯಣಸ್ವಾಮಿ ಇದ್ದರು.

ಕೋಲಾರ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲನೆ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ.ಅ.16: ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರವರು ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲಿಸಿದರು.
ಬೆಳಗ್ಗೆ 11 ಗಂಟೆಯಿಂದ ರಾಯಲ್ಪಾಡು, ಲಕ್ಷ್ಮೀಸಾಗರ, ರೋಣೂರು, ಯಲ್ದೂರು, ದುಗ್ಗಸಂದ್ರ, ಮುಳಬಾಗಿಲು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮತಗಟ್ಟೆಗಳನ್ನು ಪರಿಶೀಲಿಸಿದ ಡಿ.ಸಿಯವರು ಕರೋನಾ ಹೆಚ್ಚಾಗುತ್ತಿರುವ ಸಲುವಾಗಿ ಸ್ವಚ್ಚತೆಯನ್ನು ಕಾಪಾಡಿ, ಅಂಗವಿಕಲ ಮತದಾರರಿಗೆ ವೀಲ್‍ಚೇರ್ ಮತ್ತು ಅವರು ಮತದಾನ ಮಾಡಲು ಒಬ್ಬ ವ್ಯಕ್ತಿ ಜೊತೆಯಲ್ಲಿ ಹೋಗಲು ನಿಯೋಜಿಸಬೇಕು. ಆ ಕಾರ್ಯಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಸೂಚಿಸಿ, ಮತದಾನಕ್ಕೆ ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಸಲು ಕಡ್ಡಾಯವಾಗಿ ಸೂಚಿಸಿ ಮಾಸ್ಕ್‍ನ್ನು ಧರಿಸಲು ಜಾಗೃತಿ ಮೂಡಿಸಬೇಕೆಂದು ತಿಳಿಸಿದರು. ಶೌಚಾಲಯಗಳನ್ನು ಶುದ್ದವಾಗಿಟ್ಟುಕೊಳ್ಳುವಂತೆ ಹೇಳಿದರು
.

ಕುಂದಾಪುರದ ಆರ್. ಎನ್.‌ ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ‌ ಜನ್ಮದಿನ ಆಚರಣೆ.

JANANUDI.COM NETWORK

ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ‌ಪೂರ್ವ ಕಾಲೇಜು ಮತ್ತು ಕುಂದಾಪುರ ಲಯನ್ಸ್ ಕ್ಲಬ್ ಇದರ‌‌ ಜಂಟಿ‌ ಆಶ್ರಯದಲ್ಲಿ ಭಾರತದ ಧೀಮಂತ ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಜನ್ಮದಿನ ಆಚರಣೆಯ ಅಂಗವಾಗಿ ಅಬ್ದುಲ್ ಕಲಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಮಾಸ್ಕ್  ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಲಯನ್ಸ್ ಕ್ಲಬ್ ನ‌‌ ಅಧ್ಯಕ್ಷರಾದ ಶ್ರೀ ಲಯನ್ ಚಂದ್ರಶೇಖರ ಕಲ್ಪತರು ಇವರು ಲಯನ್ಸ್ ಕ್ಲಬ್ ನ‌ ಸಮಾಜ ಮುಖಿ ಕಾರ್ಯ ಯೋಜನೆಗಳ‌ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿ ಅಬ್ದುಲ್ ಕಲಾಂರ ವರ ಜೀವನ ಮೌಲ್ಯಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ‌ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಲಯನ್ಸ್ ಕ್ಲಬ್ ನ ಕೋಶಾಧಿಕಾರಿ ಲಯನ್ ಕಿರಣ್ ಕುಮಾರ್, ರೀಜನಲ್ ಸೆಕ್ರೆಟರಿ ಲಯನ್ ವೇಣುಗೋಪಾಲ್ ಶೆಟ್ಟಿ, ಕ್ಯಾಬಿನೇಟ್ ಮೆಂಬರ್ ಲಯನ್‌ ರಾಜೀವ್ ಕೋಟ್ಯಾನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿ ವಂದನೆ ಸಲ್ಲಿಸಿದರು.  

ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿಯ ಕಾರ್ಯ ನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಎದುರು ರೈತ ಸಂಘ ಧರಣಿ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ಕೃಷಿ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.
 ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿನ ಕೃಷಿ ಇಲಾಖೆ ಕಚೇರಿಯಲ್ಲಿ ಹತ್ತು ವರ್ಷಗಳಿಂದ  ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯನ್ನು ಶಿಸ್ತು ಕ್ರಮವಾಗಿ ಕಾರವಾರದಿಂದ ಇಲ್ಲಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅವರು ಇಲ್ಲೂ ಸಹ ಬೇರೆ ಇಲಾಖೆಗಳಿಗೆ ಬೇನಾಮಿ ಹೆಸರಲ್ಲಿ ಅರ್ಜಿ ಸಲ್ಲಿಸಿ ಹಣ ಪಡೆದುಕೊಂಡಿದ್ದಾರೆ ಎಂದು ಆಪಾದಿಸಿದರು.   ಸಂಘದ ತಾಲ್ಲೂಕು ಘಟಕದ ಅದ್ಯಕ್ಷ ಶ್ರೀರಾಮರೆಡ್ಡಿ ಮಾತನಾಡಿ, ಕೃಷಿ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ರೈತ ವಿರೋಧಿ ಸಿಬ್ಬಂದಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.  ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಧನಂಜಯ್‌ ಅವರಿಗೆ ನೀಡಿದರು.  ಮುಖಂಡರಾದ ಬೈರಾರೆಡ್ಡಿ, ನಾರಾಯಣಸ್ವಾಮಿ, ಶ್ರೀಧರ್‌, ದೇವರಾಜು, ವೀರಪ್ಪರೆಡ್ಡಿ, ಅಶ್ರಫ್‌, ನರಸಿಣಹಮೂರ್ತಿ, ಅಸ್ಲಂಪಾಷ, ರಾಜಣ್ಣ, ಮುನಿರಾಜು ಇದ್ದರು.

ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಉಪಾಧ್ಯಕ್ಷರಾಗಿ ಭರತ್ ವಿ.ಶೆಟ್ಟಿ ಆಯ್ಕೆ

JANANUDI.COM NETWORK


ಕೋಟ: ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘ ದಾವಣಗೆರೆ ಇದರ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕುಂದಾಪುರ ತಾಲೂಕು ಬಸ್ರೂರಿನ ರಾಜ್ಯ ಪ್ರಶಸ್ತಿ ಪುರಸ್ಕøತ ನಿವೃತ್ತ ಮುಖ್ಯ ಶಿಕ್ಷಕ ಎಂ.ವೀರಣ್ಣ ಶೆಟ್ಟಿ ಅವರ ಪುತ್ರ ಭರತ್ ವಿ.ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉಡುಪಿ ಜಿಲ್ಲಾ ಗ್ರಾಮ ಲೆಕ್ಕಿಗ ಸಂಘದ ಅಧ್ಯಕ್ಷರಾಗಿದ್ದು, ಪ್ರಸ್ತುತ ಕುಂದಾಪುರ ತಾಲೂಕು ಪ್ರಭಾರ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದೇಶದ ಭದ್ರತೆ ಮತ್ತು ಭವಿಷ್ಯವು ಯುವ ಸಮುದಾಯದ ಮೇಲೆ ಅವಲಂಬಿತವಾಗಿದೆ – ಲೋಕೇಶ್

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ  : ಭದ್ರತೆ ಮತ್ತು ಭವಿಷ್ಯವು ಯುವ ಸಮುದಾಯದ ಮೇಲೆ ಆವಲಂಬಿತವಾಗಿದ್ದು, ಇಂತಹ ಯುವ ಸಮುದಾಯ ಸದೃಢವಾಗಲು ಮನಸ್ಸು ಮತ್ತು ದೇಹದ ದೃಢತೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಲಿಷ್ಟ ಭಾರತ ನಿರ್ಮಿಸಲು ಶ್ರಮಿಸಬೇಕಾಗಿದೆ ಎಂದು ಶ್ರೀನಿವಾಸಸಂದ್ರ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಲೋಕೇಶ್ ಅವರು ಅಭಿಪ್ರಾಯ ಪಟ್ಟರು.ಇಂದು ಕೆ.ಜಿ.ಎಫ್ ತಾಲ್ಲೂಕಿನ ಕರಡಗೂರಿನಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಕೋಲಾರ, ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ಜನ ವಿಕಾಸ ಯುವಜನ ಸೇವಾ ಸಂಸ್ಥೆ, ಕೋಲಾರ ಹಾಗೂ ಸೂರ್ಯೋದಯ ಯುವಕರ ಸಂಘ ಕರಡಗೂರು, ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಸಧೃಡ ಭಾರತಕ್ಕಾಗಿ ಬೈಸಿಕಲ್ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ನೀಡಿ ಅವರು ಮಾತನಾಡಿದರು. ಭವ್ಯ ಭಾರತ ಕನಸು ನನಸಗಾಲು ನಾವು ಪಣತೊಡಬೇಕು. ದೇಶದ ಸಮಗ್ರತೆ ಐಕ್ಯತೆಗೆ ಒಂದಾಗಿ ದುಡಿಯಬೇಕು ಎಂದರು.ಸುರ್ಯೋದಯ ಯುವಕರ ಸಂಘದ ಅಧ್ಯಕ್ಷ ಗಜೇಂದ್ರ ಅವರು ಮಾತನಾಡಿ ದೇಶದ ಎಲ್ಲೆಡೆ ಸ್ವಚ್ಚ ಭಾರತದಂತೆ ಫಿಟ್ ಇಂಡಿಯಾ ಕಾರ್ಯಕ್ರಮ ನಡೆಯುತ್ತಿದ್ದು, ಯುವ ಜನರು ರಾಷ್ಟ್ರೀಯ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಮನೆಮನೆಯಲ್ಲಿ ಜಾಗೃತಿ ಮೂಡಿಸಿ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾರಬೇಕೆಂದರು.ರಾಷ್ಟ್ರದ ಬೆಳವಣಿಗೆಗೆ ಯುವ ಪೀಳಿಗೆ ಮುಂದಾಗಬೇಕು. ರಾಷ್ಟ್ರ ಕಟ್ಟುವಂತಹ ನಿಲುವಲ್ಲಿ ದೈಹಿಕ ಮತ್ತು ಮಾನಸಿಕವಾಗಿ ಮುಂದೆ ಬರಬೇಕು. ಪ್ರತಿಯೊಂದು ಹಂತಹಂತದಲ್ಲೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ ನಿರ್ಮಾಣ ಪ್ರೇಮಿಗಳಾಗಬೇಕೆಂದು ತಿಳಿಸಿದರು.ನೆಹರು ಯುವಕೇಂದ್ರದ ಎಸ್ ಪ್ರವೀಣ್‍ಕುಮಾರ್ ಮಾತನಾಡಿ ಭಾರತೀಯರು ದೈಹಿಕ ಚಟುವಟಿಕೆಗಳಲ್ಲಿ ದೂರ ಉಳಿಯುತ್ತಿದ್ದಾರೆ. ಶೇ54% ರಷ್ಟು ಭಾರತೀಯರು ದೈಹಿಕವಾಗಿ ಆಲಸಿಗಳಾಗಿದ್ದಾರೆ. ಇದರಿಂದಾಗಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಆದ್ದರಿಂದ ಜನರು ತಮ್ಮ ದೈನಂದಿನ ಬದುಕಿನಲ್ಲಿ ದೈಹಿಕ ಚಟುವಟಿಕೆ, ಕ್ರೀಡೆಗಳನ್ನು ತೊಡಗಿಸಿಕೊಳ್ಳಲು ಉತ್ತೇಜಿಸುವ ಗುರಿಯೊಂದಿಗೆ ಆರಂಭವಾಗಿರುವ ಅಭಿಯಾನ ಇದಾಗಿದೆ ಎಂದರು. ಯುವಜನತೆ ಸ್ವಾಮಿ ವಿವೇಕಾನಂದರು ನೀಡಿದ ತತ್ವ ಆರ್ದಶಗಳು ಪಾಲಿಸಿ ಪ್ರಾಮಾಣಿಕ ಚಿಂತನೆ ಮಾಡಬೇಕಿದೆ. ಜಿಲ್ಲೆಯಲ್ಲಿ ಕೋರೋನಾ ಹೆಚ್ಚಾಗುತ್ತಿದ್ದು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೆ ಸದ್ಯದ ಲಸಿಕೆಯಾಗಿದೆ. ಪೌಷ್ಟಿಕ ಆಹಾರ ಸೇವೆನೆಯಿಂದ ಮತ್ತು ದೈಹಿಕ ವ್ಯಾಯಾಮದಿಂದ ರೋಗಗಳಿಂದ ದೂರವಿರಬಹುದಾಗಿದೆ ಎಂದರು.

ವಿವಿಧ ಕಾರಣಗಳಿಂದ ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು : ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ : ವಿವಿಧ ಕಾರಣಗಳಿಂದ ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಪೊಲೀಸ್ ಇಲಾಖೆ , ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು  ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳಿಗೆ ಆರ್ಡರ್ 32 ರಲ್ಲಿ , ಚಾಪ್ಟರ್ 55 ರಲ್ಲಿ , ಐ . ಪಿ . ಸಿ ಸೆಕ್ಷನ್ 84 ಮತ್ತು 98 ಮೂಲಕ ಅವರಿಗೆ ಸಹಾಯ ಮಾಡಬಹುದಾಗಿದೆ . ಕೌಟುಂಬಿಕ ವ್ಯವಹಾರಗಳು , ಪತಿ ಪತ್ನಿ ವಿಚ್ಛೇದನ , ಸ್ವಯಂ ತೊಂದರೆ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದರು .  ಮಾನಸಿಕ ಅಸ್ವಸ್ಥರು ಕಂಡುಬಂದರೆ ಅಂತಹವರನ್ನು ಗುರುತಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿ , ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗಮನಹರಿಸಿ ಇಂತಹ ಖಾಯಿಲೆಗಳನ್ನು ತಡೆಯಬೇಕಾಗಿದೆ ಎಂದರು . ವಕೀಲರ ಸಂಘದ ಕಾರ್ಯದರ್ಶಿಗಳಾದ ರಘುಪತಿ ಗೌಡ ಅವರು ಮಾತನಾಡಿ , ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳು ಯಾವ ಕಾರಣಕ್ಕಾಗಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಗುರುತಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಿ ಅವರನ್ನು ಸಮಾಜಕ್ಕೆ ಉತ್ತಮ ಪ್ರಜೆಯಾಗಿ ಮಾಡಬೇಕು , ಹಳ್ಳಿ ಹಳ್ಳಿಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಬೇಕು ಎಂದರು . ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳಾದ ಡಾ ಎನ್ . ಸಿ ನಾರಾಯಣಸ್ವಾಮಿ ಅವರು ಮಾತನಾಡಿ , ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮಾಡಲಾಗುತ್ತದೆ . ಅದರಂತೆಯೇ ‘ ಎಲ್ಲರಿಗೂ ಮಾನಸಿಕ ಆರೋಗ್ಯ : ಹೆಚ್ಚಿನ ಹೂಡಿಕೆ – ಚಿಕಿತ್ಸೆಗೆ ಹೆಚ್ಚಿನ ಅವಕಾಶ ‘ ಎಂಬ ಘೋಷಣೆಯೊಂದಿಗೆ ಅಕ್ಟೋಬರ್ 15 ರಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದರು . ಭಾರತದಲ್ಲಿ 4.57 ಕೋಟಿ ಜನರು ಅಲ್ಪ ಮಟ್ಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಹಾಗೂ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಜನಕ್ಕೆ ಚಿಕಿತ್ಸೆ ನೀಡಲಾಗುತ್ತಿದ್ದು , 4 ಸಾವಿರ ಜನ ಮೂರ್ಛ ರೋಗದಿಂದ , 2504 ಜನ ತಿವ್ಯ ಮಟ್ಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದಾರೆ , 709 ಬುದ್ಧಿ ಮಾಂದ್ಯ ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ . ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳಿಗೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿ ಮತ್ತು ಅಂತರಗಂಗೆಯಲ್ಲಿರುವ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು .

ಕಾರ್ಯಕ್ರಮದಲ್ಲಿ ಕೋವಿಡ್ 19 ಹಿನ್ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋದಿಸಲಾಯಿತು . ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್ ಗಂಗಾಧರ್ , ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ ಡಿ , ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ , ವಕೀಲರಾದ ಧನ್ ರಾಯ್ , ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರೇಮ ಸೇರಿದಂತೆ ಹಿರಿಯ ಮತ್ತು ಕಿರಿಯ ವಕೀಲರು ಹಾಗೂ ಪೋಲಿಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು .

ಮಣಿಪಾಲ MDMA ನಿಷೇದಿತ ಮಾತ್ರೆಗಳು ಹಾಗೂ ಬ್ರೌನ್ ಶುಗರ್ ಮಾರಾಟ ವಶ ಬ್ರಹ್ಮಾವರದ ವ್ಯಕ್ತಿಯ ಬಂಧನ

JANANUDI.COM NETWORK


ಮಣಿಪಾಲ/ಕುಂದಾಪುರ: ದಿನಾಂಕ 14.10.2020 ರಂದು ಮಣಿಪಾಲದ ಆರ್.ಟಿ.ಒ.ಕಛೇರಿ ರಸ್ತೆಯ ಎಂಡ್ ಪಾಯಿಂಟ್ ಬಳಿ ಬ್ರಹ್ಮಾವರದ ಮಹಮ್ಮದ್ ಫಜಲ್ MDMA ನಿಷೇದಿತ ಮಾತ್ರೆಗಳು ಹಾಗೂ ಬ್ರೌನ್ ಶುಗರನ್ನು ಮಣಿಪಾಲದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿರುವ ಸಂದರ್ಭದಲ್ಲಿ, ಗುಪ್ತ ಮಾಹಿತಿ ಸಂಗ್ರಹಿಸಿ ಮಣಿಪಾಲದ ಪೋಲೀಸರು ದಾಳಿ ಮಾಡಿ ಮಹಮ್ಮದ್ ಫಜಲ್ ನನ್ನು ವಶಕ್ಕೆ ಪಡೆದುಕೊಂಡು 54 ನಿಷೇದಿತ MDMA Ecstasy   ಮಾತ್ರೆಗಳು ಹಾಗೂ 30 ಗ್ರಾಮ್ ಬ್ರೌನ್ ಶುಗರ್ ಮತ್ತು ಎರಡು ಮೊಬಾಯ್ಲ್ ಪೋನ್ ಗಳನ್ನು ವಶ ಪಡಿಸಿಕೊಂಡಿದ್ದಾರೆ. ಮಾದಕ ವಸ್ತುಗಳ ಬೆಲೆ ಅಂದಾಜು ಮೌಲ್ಯ 4,62,000/ರೂಪಾಯಿಗಳಾಗುತ್ತವೆ’ ಎಂದು ಪೋಲೀಸ್ ಮೂಲಗಳಿಂದ ತಿಳಿದುಬಂದಿದೆ.
ಈ ದಾಳಿಯನ್ನು ಉಡುಪಿ ಪೋಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಐ.ಪಿ.ಎಸ್, ಹೆಚ್ಚುವರಿ ಅಧೀಕ್ಷಕರಾದ ಕುಮಾರ ಚಂದ್ರ ಕೆ.ಎಸ್.ಪಿ.ಎಸ್, ಉಡುಪಿ ಪೋಲೀಸ್ ಉಪಾಧೀಕ್ಷಕರಾದ ಜೈ ಶಂಕರ್ ಇವರ ಮಾರ್ಗದರ್ಶನದಲ್ಲಿ ಸಹಾಯಕ ಪೋಲೀಸ್ ಅಧೀಕ್ಷಕರಾದ ಕುಂದಾಪುರ ವಿಭಾಗದ ಹರಿರಾಮ ಶಂಕರ್, ಐ.ಪಿ.ಎಸ್. ಇವರ ನೇತ್ರತ್ವದಲ್ಲಿ ಸಹಾಯಕ ಡ್ರಗ್ಸ್ ಕಂಟ್ರೋಲರ್ ನಾಗರಾಜ್, ಮಣಿಪಾಲ ಪೋಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ್ ಎಮ್.ಗೌಡ, ಪಿ.ಎಸ್.ಐ. ರಾಜಶೇಖರ ವಂದಲಿ, ಎ.ಎಸ್.ಐ. ಶೈಲೇಶ್, ಎಚ್.ಸಿ. ಪ್ರಸನ್ನ, ಎಚ್.ಸಿ. ಥೋಮ್ಸನ್, ಪಿ.ಸಿ. ಆದರ್ಶ್, ಎಪಿಸಿ ಸುಧೀಪ್ ಇವರು ಭಾಗವಹಿಸಿದ್ದರು ಎಂದು ಪೋಲೀಸ್ ಮೂಲಗಳು ತಿಳಿಸಿವೆ.