HOLY ROSARY CHURCH, KUNDAPUR – 450 th JUBILEE SOUVENIR 2021

ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ ಪಾಷಾ ಅಧಿಕಾರ ಸ್ವೀಕಾರ

ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ ಪಾಷಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು .

ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು .

ಈ ವೇಳೆ ಅಪರ ಜಿಲ್ಲಾಧಿಕಾರಿಯವರಿಗೆ ಹೂಗುಚ್ಚು ನೀಡಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಉಪವಿಭಗಾಧಿಕಾರಿ ವೆಂಕಟಲಕ್ಷ್ಮಿ ಜಿಲ್ಲೆಯ ಎಲ್ಲ ತಹಸೀಲ್ದಾರ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರುಗಳು ಹಾಜರಿದ್ದರು.

ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ-ವಿಮರ್ಶಾತ್ಮಕ ಚಿಂತನಾ ಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು:ಡಾ| ಎಂ. ಮಹಾಬಲೇಶ್ವರ ರಾವ್

ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್‍ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ ಬಗ್ಗೆ ನಮ್ಮ ಚಿಂತನೆ ಜೀವನದಲ್ಲಿ ರೂಢಿಯಾದರೆ ಯಾವುದೇ ಸಿದ್ಧ ಚೌಕಟ್ಟನ್ನು ಮುರಿದು ಬೆಳೆಯಬಹುದು. ಸೃಜನಾತ್ಮಕ ಚಿಂತನೆ ವಿದ್ಯಾರ್ಥಿಗಳಿಗೆ ಅಗತ್ಯ” ಎಂದು ಶಿಕ್ಷಣ ತಜ್ಞ, ನಿವೃತ್ತ ಪ್ರಾಂಶುಪಾಲ ಡಾ| ಎಂ. ಮಹಾಬಲೇಶ್ವರ ರಾವ್ ಹೇಳಿದರು.
ಕುಂದಾಪುರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ವಿದ್ಯಾರ್ಥಿ ಸಹಾಯಧನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಎಸ್.ಎಸ್.ಎಲ್.ಸಿ.ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿದ ಅವರು “ಕಷ್ಟಗಳು ಬಂದಾಗ ಎದುರಿಸುವ ತಾಳ್ಮೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಕಡಿಮೆ ಅಂಕ, ಫೈಲಾಗುವುದು ಜೀವನದ ಸಂಕಷ್ಟ ಅಲ್ಲ, ಇನ್ನೂ ಅವಕಾಶವಿದೆ. ಜೀವನ ಧೀರ್ಘವಾಗಿದೆ. ಬದುಕು ಬದುಕಲು ಯೋಗ್ಯವಾಗಿದೆ ಎಂದು ತಿಳಿಯಬೇಕು. ನಾವು ತಂತ್ರಜ್ಞಾನದ ಗುಲಾಮರಾಗಬಾರದು. ಅಂತರ್ಜಾಲ ಬಳಕೆಯ ಮೌಲ್ಯ ಅರಿತಿರಬೇಕು. ಪೌರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಹೇಳಿದ ಅವರು ಹೆತ್ತವರು ಮಕ್ಕಳು ನಮ್ಮಂತೆ ಕಷ್ಟ ಪಡಬಾರದು ಎಂಬ ಕಾರಣಕ್ಕೆ ಅವರನ್ನು “ಪರಪುಟ್ಟ”ರನ್ನಾಗಿ ಮಾಡಬಾರದು ಎಂದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಮಾರಂಭವನ್ನು ಉದ್ಘಾಟಿಸಿ, ಪಿಯುಸಿ ರ್ಯಾಂಕ್ ವಿಜೇತರನ್ನು ಗೌರವಿಸಿದರು.
“ಗಿಳಿಯಾರು ಕುಶಲ ಹೆಗ್ಡೆ ಓರ್ವ ಸರಳ, ಸಜ್ಜನ ವ್ಯಕ್ತಿ. ಅವರು ಜೀವನದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಹಕಾರ, ಸೇವಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದವರು. ಅವರ ಹೆಸರಲ್ಲಿ ಕುಟುಂಬದವರು, ಹಿತೈಷಿಗಳು ದತ್ತಿ ಸಂಸ್ಥೆ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಹಲವು ಸಮಾಜ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ. ಕೋವಿಡ್ ಸಮಸ್ಯೆಯ ಕಾಲದಲ್ಲೂ ಉತ್ತಮವಾಗಿ ಸ್ಪಂದಿಸಿ ಜನರಿಗೆ ನೆರವಾದವರು. ಇಂತಹ ಸೇವೆ ನಿರಂತರವಾಗಿ ಮುಂದುವರೆಯಲಿ” ಎಂದರು.
ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಗಿಳಿಯಾರು ಕುಶಲ ಹೆಗ್ಡೆಯವರ ಸಾಧನೆ ವಿವರಿಸಿದರು.
ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನ ವಿಶ್ವಸ್ಥರಾದ ಹಿರಿಯ ಗುತ್ತಿಗೆದಾರ, ಇಂಜಿನಿಯರ್ ಉದಯ ಹೆಗ್ಡೆ, ಗಿಳಿಯಾರು ಕುಶಲ ಹೆಗ್ಡೆ ದತ್ತಿನಿಧಿ ಯೋಜನೆ, ಸಾಧನೆ ವಿವರಿಸಿದರು.
ಟ್ರಸ್ಟ್‍ನ ವಿಶ್ವಸ್ಥ ಹಿರಿಯ ವಕೀಲ ಸಂತೋಷ್ ಕುಮಾರ್ ಶೆಟ್ಟಿ, ಹಂದಕುಂದ ಸೋಮಶೇಖರ ಶೆಟ್ಟಿ, ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು.
ವಿಶ್ವಸ್ಥ ಕೆ. ನಾರಾಯಣ ಸಹಾಯಧನ ಪಡೆದ ವಿದ್ಯಾರ್ಥಿಗಳ ವಿವರ ನೀಡಿದರು.
ಖಜಾಂಚಿ ಸ್ನೇಹಾ ರೈ, ವಿಶ್ವಸ್ಥರಾದ ಕಿಶೋರ್ ಹೆಗ್ಡೆ, ಸ್ವರೂಪ್ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು.
ಯು.ಎಸ್.ಶೆಣೈ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ವಿಶ್ವ ಯೋಗ ದಿನಾಚರಣೆ


ಕುಂದಾಪುರ: ಯೋಗಕ್ಕೆ ಸಮಯ ಮತ್ತು ಗಮನ ಕೊಟ್ಟರೇ ಅದು ನಮಗೆ ಆರೋಗ್ಯವನ್ನು ನೀಡುತ್ತದೆ. ಮಾನಸಿಕವಾಗಿ, ದೈಹಿಕವಾಗಿ ದೇಹ ಸದೃಢವಾಗುತ್ತದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಡಶಾಲೆಯ ಎನ್‍ಸಿಸಿ ಅಧಿಕಾರಿ ಭಾಸ್ಕರ್ ಗಾಣಿಗ ಹೇಳಿದರು.
ಅವರು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಶಿಕ್ಷಕಿಯರಾದ ಪ್ರೀತಿ ಪಾಯಸ್, ಸುಶೀಲ ಖಾರ್ವಿ, ಡೀನಾ ಪಾಯಸ್ ಸಹಕರಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ಮತದಾನ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು


ಕುಂದಾಪುರ: ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರ, 13 ರಿಂದ 15 ವರ್ಷದ ವಿದ್ಯಾರ್ಥಿಗಳಿದ ಮತದಾನ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯ ಆಯ್ಕೆ. ಇದು ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಮಕ್ಕಳ ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಕಂಡು ಬಂದ ದೃಶ್ಯ. ಶಾಲೆಯ ವಿವಿಧ ಚಟುವಟಿಕೆಗಳಾದ ಶೈಕ್ಷಣಿಕ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ, ಕ್ರೀಡೆ, ಶಾಲೆ ಸ್ವಚ್ಛತೆ, ಊಟ ಇನ್ನಿತರ ಚಟುವಟಿಕೆಗಳಲ್ಲಿ ಜವಾಬ್ದಾರಿ ತೆಗೆದುಕೊಂಡು ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಈ ಚುನಾವಣೆ ನಡೆಸಲಾಗಿಯಿತು. ಅಲ್ಲದೇ ಪಠ್ಯದಲ್ಲಿದ್ದನ್ನು ಪ್ರಾತ್ಯಕ್ಷಿಕವಾಗಿ ತೋರಿಸಿ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವುದು ಚುನಾವಣೆಯ ಉದ್ದೇಶವಾಗಿದೆ. ಜತೆಗೆ ಮಕ್ಕಳಿಗೆ ಜವಾಬ್ದಾರಿ, ಮುಂದಾಳತ್ವ, ಎಲ್ಲರನ್ನು ಮುನ್ನಡೆಸುವ ಶಕ್ತಿಯ ವೃದ್ದಿಸುವುದು ಶಾಲಾ ಸಂಸತ್ ಚುನಾವಣೆ ಪ್ರಮುಖ ಭಾಗವಾಗಿದೆ.
ವಿದ್ಯಾರ್ಥಿಗಳು ಮೊದಲ ಬಾರಿಗೆ ಚುನಾವಣೆ ಅನುಭವ ಪಡೆದರು. ವಿಧಾನ ಸಭೆ, ಲೋಕಸಭೆ ಚುನಾವಣೆಗಳ ಮಾದರಿಯಲ್ಲೇ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ಹಿಂತೆಗೆದು ಕೊಳ್ಳುವಿಕೆ, ಪ್ರಚಾರ, ಮತದಾನ ಎಲ್ಲವೂ ವ್ಯವಸ್ಥಿತವಾಗಿ ಏರ್ಪಟ್ಟಿತ್ತು. ಪ್ರಜಾ ಪ್ರಭುತ್ವ ಎಂದರೆ ಏನು? ಮತದಾನದ ರೀತಿ ನೀತಿಗಳೇನು, ಮತದಾನ ಹೇಗೆ ಮಾಡಬೇಕು, ಮುಖ್ಯಮಂತ್ರಿಗಳ,ಉಪಮುಖ್ಯಮಂತ್ರಿಗಳ ಕೆಲಸ ಕಾರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಸೋಮವಾರ ಮಕ್ಕಳಿಂದ ಮತದಾನ ನಡೆಯಿತು. ಮತಪತ್ರ ನೀಡುವಿಕೆ, ಶಾಯಿ ಹಚ್ಚುವಿಕೆ, ಮತ ಹಾಕುವುದು, ಸಹಿ ಮಾಡುವುದು ನಿಜವಾದ ಚುನಾವಣೆಯನ್ನೇ ನೆನೆಪಿಸಿದವು. ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಫಲಿತಾಂಶವೂ ಪ್ರಕಟಗೊಳಿಸಲಾಯಿತು. ಮತಗಟ್ಟೆಗೆ ಪೆÇೀಲಿಸ್ (ಎನ್‍ಸಿಸಿ ವಿದ್ಯಾರ್ಥಿ)ಬಿಗಿ ಭದ್ರತೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಅವರ ಮಾರ್ಗದರ್ಶನದಲ್ಲಿ ಚುನಾವಣಾ ಅಧಿಕಾರಿ ಸುಶೀಲಾ ಖಾರ್ವಿ ನೇತೃತ್ವದಲ್ಲಿ ಶಿಕ್ಷಕರಾದ ಭಾಸ್ಕರ್ ಗಾಣಿಗ, ಸಿಸ್ಟರ್ ಚೇತನಾ, ಪ್ರೀತಿ ಪಾಯಸ್, ಚಂದ್ರಶೇಖರ್ ಬೀಜಾಡಿ, ಸ್ಮಿತಾ ಡಿ.ಸೋಜಾ, ಡೀನಾ ಪಾಯಸ್ ಅಧಿಕಾರಿಗಳಾಗಿ ವಿದ್ಯಾರ್ಥಿಗಳ ಚುನಾವಣೆಯನ್ನು ನಿಭಾಯಿಸಿದ್ದರು. 10 ನೇ ತರಗತಿಯ ಮನ್ವಿತಾ ಮುಖ್ಯಮಂತ್ರಿಯಾಗಿ, 9ನೇ ತರಗತಿಯ ಕಾರ್ತೀಕ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಕುಂದಾಪುರ : ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಕುಂದಾಪುರ
: ಸ್ಥಳೀಯ ಸಂತ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿ ’ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ದೇಹದ ಸರ್ವತೋಮುಖ ಬೆಳವಣಿಗೆ ಆಗುತ್ತದೆ, ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದು ಮಕ್ಕಳಿಗೆ ತಿಳಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಶಿಕ್ಷಕಿಯರಾದ ಜ್ಯೋತಿ ಡಿಸಿಲ್ವ, ಶ್ರೀಮತಿ, ಆನ್ನಿ ಕ್ರಾಸ್ತಾ, ಗೀತಾ ನೊರೊನ್ಹಾ, ಪ್ರೀತಿ ಹಾಗೂ ಸುರೇಖಾ ಸಹಕರಿಸಿದರು.

ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ‘ಎನ್.ಸಿ.ಸಿಯ ವಿಶ್ವ ಯೋಗ ದಿನಾಚರಣೆ


ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು .

ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು ಯೋಗ ಮುಖ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು.ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ಯೋಗವು ಮೂಲಭೂತವಾಗಿ ಭಾರತದ ಉಪಖಂಡದಲ್ಲಿ ಹುಟ್ಟಿಕೊಂಡಿತು. ಪ್ರಾಚೀನ ಕಾಲದಿಂದಲೂ ಯೋಗವನ್ನು ಯೋಗಿಗಳು ನಿರ್ವಹಿಸುತ್ತಾರೆ. ಯೋಗದ ಪದದ ಅರ್ಥ ಒಕ್ಕೂಟ ಮತ್ತು ಶಿಸ್ತು ಎಂದು ಸಂಸ್ಕೃತದಿಂದ ಅನುವಾದಿಸುತ್ತದೆ. ಯೋಗವು ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. ಹೀಗಾಗಿ ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಯೋಗದ ಬಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಾರೆ ಎಂದು ಕ್ಯಾಡೆಟ್ ಆಶಿಕಾ ತಿಳಿಸಿ, ವಿಶ್ವ ಯೋಗ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು.ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಲ್ಲ್ಯಾನ್ಸ್ ಕಾರ್ಪೊರಲ್ ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಸ್ವಾಗತಿಸಿ , ಕೆಡೆಟ್ ಕೃತಿಕಾ ವಂದಿಸಿದರು. ಕೆಡೆಟ್ ಸೋನಾಲಿ ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 9ನೇ ವಿಶ್ವ ಯೋಗ ದಿನಾಚರಣೆ


ನಂದಳಿಕೆ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ, ಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗ ಇವರ ಸಂಯಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಬುಧವಾರ 9ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಬಿರದಲ್ಲಿ ಆರತಿ ಕುಮಾರಿ ಅವರು ಯೋಗ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಬೆಳ್ಮಣ್ಣು ಯುವ ಜೇಸಿ ವಿಭಾಗದ ಅಧ್ಯಕ್ಷ ಕೀರ್ತನ್ ಪೂಜಾರಿ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷೆ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಅಬ್ಬನಡ್ಕ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಸದಸ್ಯರಾದ ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಹರಿಣಾಕ್ಷಿ ಪೂಜಾರಿ ಮೊದಲಾದವರಿದ್ದರು.



ಹೆಚ್ಚುವರಿ ಶಿಕ್ಷಕರ ತಾಲ್ಲೂಕು ಮಟ್ಟದ ಸ್ಥಳ ಆಯ್ಕೆ ಪ್ರಕ್ರಿಯೆ ಯಶಸ್ವಿ : ಸರ್ವರ್ ಅಡಚಣೆ ನಡುವೆಯೂ ಗೊಂದಲರಹಿತ ಕೌನ್ಸಿಲಿಂಗ್-ಕೃಷ್ಣಮೂರ್ತಿ

ಕೋಲಾರ:- ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಸರ್ವರ್ ಸಮಸ್ಯೆ ನಡುವೆಯೂ ಯಶಸ್ವಿಯಾಗಿ ನಡೆದಿದ್ದು, ಗೊಂದಲಗಳಿಗೆ ಅವಕಾಶವಿಲ್ಲದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಖುದ್ದು ನೇತೃತ್ವ ವಹಿಸಿದ್ದರು.
ನಗರದ ಡಿಡಿಪಿಐ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಾಗಿದ್ದ ಪ್ರಾಥಮಿಕ ಶಾಲಾ ಹೆಚ್ವುವರಿ ಶಿಕ್ಷಕರು,ಮುಖ್ಯಶಿಕ್ಷಕರ ಕೌನ್ಸಿಲಿಂಗ್‍ಗೆ ಸರ್ವರ್ ಸಮಸ್ಯೆ ಎದುರಾದ ಕಾರಣ ಸುಮಾರು 2 ಗಂಟೆಗಳ ಕಾಲ ವಿಳಂಬವಾಯಿತು.
12 ಗಂಟೆ ಸುಮಾರಿಗೆ ಸರ್ವರ್ ಸಮಸ್ಯೆ ಸರಿಹೋಗುತ್ತಿದ್ದಂತೆ ಮೊದಲಿಗೆ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಕೌನ್ಸಿಲಿಂಗ್ ಮುಗಿಸಲಾಗಿದ್ದು, ನಂತರ ದೈಹಿಕ ಶಿಕ್ಷಕರ ಕೌನ್ಸಿಲಿಂಗ್ ನಡೆಯಿತು.
ಈ ವೇಳೆಗಾಗಲೇ 2 ಗಂಟೆ ಮುಗಿದಿದ್ದು, ನಂತರ ಪ್ರಾಥಮಿಕ ಶಾಲಾ ಸಹಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಸರ್ವರ್ ಸಮಸ್ಯೆ ಕಾಡಿದ್ದರಿಂದಾಗಿ ಕೌನ್ಸಿಲಿಂಗ್ ಕುಂಟುತ್ತಾ ಸಾಗಿತು.
ಸಂಜೆ 4 ಗಂಟೆಯಾದರೂ 250 ಮಂದಿ ಪ್ರಾಥಮಿಕ ಶಿಕ್ಷಕರಲ್ಲಿ ಕೇವಲ 50 ಮಂದಿಯ ಕೌನ್ಸಿಲಿಂಗ್ ಹಾಗೂ ಸ್ಥಳ ಆಯ್ಕೆ ಪ್ರಕ್ರಿಯೆ ಮಾತ್ರವೇ ಮುಗಿದಿದ್ದು, ಎಲ್ಲಾ ಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆ ಮುಗಿಯಲು ಸಂಜೆ 6 ಗಂಟೆಯಾದರೂ ಬೇಕು ಎಂಬ ಮಾತುಗಳ ಶಿಕ್ಷಕ ವಲಯದಲ್ಲಿ ಕೇಳಿ ಬರುತ್ತಿತ್ತು.

ಪ್ರೌಢಶಾಲಾ ಶಿಕ್ಷಕರ ಕೌನ್ಸಿಲಿಂಗ್ ವಿಳಂಬ


ಈ ನಡುವೆ ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳಬೇಕಿದ್ದ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ವಿಳಂಬವಾಗಿದ್ದು, ಶಿಕ್ಷಕರು ತಮ್ಮ ಸ್ಥಳ ಆಯ್ಕೆಯಾಗಿ ಕಾತರದಿಂದ ಕಾದಿದ್ದುದು ಕಂಡು ಬಂತು.
ಇದು ರಾಜ್ಯಮಟ್ಟದ ಪ್ರಕ್ರಿಯೆಯಾಗಿದ್ದು, ಇಂದು ತಾಲ್ಲೂಕುಮಟ್ಟದಲ್ಲಿ ಸ್ಥಳ ಆಯ್ಕೆ ಕೌನ್ಸಿಲಿಂಗ್ ಪ್ರಕ್ರಿಯೆ ಮುಗಿಸಲೇಬೇಕಾಗಿದೆ ಎಂಬುದು ಇಲಾಖೆಯ ಅಧಿಕಾರಿಗಳ ಮಾತಾಗಿದೆ.
ನಾಳೆಯೇ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಜಿಲ್ಲಾಮಟ್ಟದ ಪ್ರಕ್ರಿಯೆಗೆ ವೇಳಾಪಟ್ಟಿ ನಿಗಧಿಯಾಗಿರುವುದರಿಂದ ಇಂದು ನಿಗಧಿಯಾಗಿರುವ ಕೌನ್ಸಿಲಿಂಗ್ ಅನ್ನು ಇಂದು ಎಷ್ಟೇ ಸಮಯವಾದರೂ ಮುಗಿಸುವುದಾಗಿ ಡಿಡಿಪಿಐ ಕೃಷ್ಣಮೂರ್ತಿ ಮಾಧ್ಯಮಗಳಿಗೆ ತಿಳಿಸಿದರು.
ಪ್ರಕ್ರಿಯೆಯಲ್ಲಿ ಇಲಾಖೆಯ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ, ಬಿಇಒಗಳಾದ ಕನ್ನಯ್ಯ ಉಮಾದೇವಿ, ಗಂಗರಾಮಯ್ಯ, ಸುಕನ್ಯಾ,ಚಂದ್ರಶೇಖರ್, ಚಂದ್ರಕಲಾ, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ,ಶಂಕರೇಗೌಡ, ವೆಂಕಟೇಶಪ್ಪ, ಎಪಿಸಿಒ ಮೋಹನ್ ಬಾಬು, ಇಲಾಖೆಯ ವ್ಯವಸ್ಥಾಪಕ ಗೋವಿಂದಗೌಡ, ಅಧೀಕ್ಷಕ ಮಂಜುನಾಥರೆಡ್ಡಿ, ಕೇಶವರೆಡ್ಡಿ, ಸಿಬ್ಬಂದಿ ಲಕ್ಷ್ಮಣ್, ಚಿರಂಜೀವಿ, ವೇಣುಗೋಪಾಲ್ ದೇವರಾಜ್ ಮತ್ತಿತರರು ಕಾರ್ಯ ನಿರ್ವಹಿಸಿದ್ದು, ಶಿಕ್ಷಕ ಮುಖಂಡರಾದ ಚೌಡಪ್ಪ, ಅಪ್ಪಿಗೌಡ,ನಾಗರಾಜ್,ಶಿವಕುಮಾರ್,ಮುರಳಿಮೋಹನ್, ಮುನಿಯಪ್ಪ, ವಿನೋದ್‍ಬಾಬು, ಕೆಜಿಎಫ್ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ವಿವಿಧ ಶಿಕ್ಷಕ ಸಂಘಟನೆಗಳ ಮುಖಂಡರು ಹಾಜರಿದ್ದರು.

ಮಂಗಳೂರು ಕಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗವು ಇಂದು ನೂತನ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಶುಭ ಹಾರೈಸಿದರು

ಮಂಗಳೂರು, ಜೂನ್ 20: ಕಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗವು ಇಂದು ನೂತನ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಶುಭ ಹಾರೈಸಿದರು.

ಮಂಗಳೂರಿನ ಬಿಷಪ್ ಅತೀ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಪರವಾಗಿ ನೂತನ ಜಿಲ್ಲಾಧಿಕಾರಿಯವರಾದ ಶ್ರೀ ಮುಳ್ಳಯಿ ಮುಗಿಲನ್ ಇವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಸ್ವಾಗತಿಸಿ ಶುಭ ಹಾರೈಕೆಗಳನ್ನು ತಲುಪಿಸಿದರು. ನಿಯೋಗದಲ್ಲಿ ಸದಸ್ಯರಾದ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ರಾಯ್ ಕ್ಯಾಸ್ತೆಲಿನೊ, ರಾಕ್ಣೊ ವಾರ ಪತ್ರಿಕೆಯ ಸಂಪಾದಕರಾದ ಫಾ. ರೂಪೇಶ್ ಮಾಡ್ತಾ, ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕರಾದ ಫಾ. ರಿಚರ್ಡ್ ಕುವೆಲ್ಹೊ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಸಂಸ್ಥೆಯ ನಿರ್ದೇಶಕರಾದ ಫಾ. ಪ್ರಕಾಶ್ ಡಿಸೋಜಾ, ಕಥೊಲಿಕ್ ಸಭಾ ಮಂಗಳೂರು ಇದರ ಪ್ರಸ್ತುತ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೊ ಹಾಗು ನೂತನ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜಾ ಇವರು ಹಾಜರಿದ್ದು ಪುಸ್ತಕವನ್ನು ಉಡುಗೊರೆಯಾಗಿ ನೀಡುವುದರೊಂದಿಗೆ ಬಿಷಪ್‍ರವರ ವತಿಯಿಂದ ಹಾರೈಕೆ ಪತ್ರವನ್ನು ನೀಡಿ ಶುಭಕೋರಿದರು.