HOLY ROSARY CHURCH, KUNDAPUR – 450 th JUBILEE SOUVENIR 2021

ಜುಲೈ 24ರಂದು ಅಬ್ಬನಡ್ಕದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಜುಲೈ 24ರಂದು ಆದಿತ್ಯವಾರ ಮಧ್ಯಾಹ್ನ 12 ಗಂಟೆಗೆ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ಪ್ರಶಾಂತ್ ಪೂಜಾರಿ ವಹಿಸಲಿದ್ದಾರೆ. ಪತ್ರಕರ್ತರಾದ ಬರೆಪ್ಪಾಡಿ ರಾಮಚಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಶಿ ಕಿಚನ್ ಯೂಟ್ಯೂಬರ್ ಶಿರ್ವ ಶಶಿಕಲಾ ಕುಲಾಲ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಲಿದ್ದಾರೆ. ಕಾರ್ಯಕ್ರಮದ ನಿರ್ದೇಶಕರಾದ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತಿತರಿರುವರು.
ಸಭಾ ಕಾರ್ಯಕ್ರಮ ಮುಗಿದ ನಂತರ ನೃತ್ಯ ಹಾಗೂ ಸಂಗೀತ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದಲ್ಲಿ 25 ಬಗೆಯ ಆಟಿ ತಿಂಗಳ ತಿನಸುಗಳೊಂದಿಗೆ ಭೋಜನಕೂಟ ಜರಗಲಿದೆ. ಎಂದು ಪತ್ರಿಕಾ ಪ್ರಕಟನೆಗೆ
ತಿಳಿಸಿದ್ದಾರೆ.

ಭಂಡಾರ್ಕಾರ್ಸ್:”ಯುವಜನತೆಯಲ್ಲಿ ಮಾನಸಿಕ ಸ್ವಾಸ್ಥ್ಯ” ದ ಕುರಿತು ಉಪನ್ಯಾಸ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ “ಯುವಜನತೆಯಲ್ಲಿ ಮಾನಸಿಕ ಸ್ವಾಸ್ಥ್ಯ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಉಡುಪಿಯ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಅವರು ಇಂದಿನ ಯುವಜನತೆಯು ಈಗಿನ ಜೀವನಶೈಲಿಯಿಂದಾಗಿ ಬೇಗ ಒತ್ತಡಗಳಿಗೆ ಒಳಗಾಗುತ್ತಾರೆ. ಯುವಜನತೆ ಒತ್ತಡ ನಿರ್ವಹಣೆಯ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ನಿಶಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ಕಾವ್ಯ ಹೆಚ್. ಸ್ವಾಗತಿಸಿ, ಅಂಜನಾದೇವಿ ಕಾರ್ಯಕ್ರಮ ನಿರ್ವಹಿಸಿ, ನೀಲಾ ಪರಿಚಯಿಸಿ, ಶೃತಿ ವಂದಿಸಿದರು.

ಶ್ರೀನಿವಾಸಪುರ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಅಧಿಕಾರಿಗಳಿಂದ ಬಂಧನ

ಶ್ರೀನಿವಾಸಪುರ: ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂದಿತನನ್ನು ಆಂಧ್ರಪ್ರದೇಶದ ವೆಂಕಟರಮಣ ಎಂದು ಗುರುತಿಸಲಾಗಿದ್ದು, ಬಂಧಿತ ವ್ಯಕ್ತಿ ನೀಡಿದ ಸುಳಿವಿನ ಮೇರೆಗೆ ತಾಲ್ಲೂಕಿನ ಪುಲಗೂರುಕೋಟೆ ಗ್ರಾಮದಲ್ಲಿ ರೂ.50 ಸಾವಿರ ಮೌಲ್ಯದ 1 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಯಿತು.

ರೈತ ಸಂಘದ ತಾಲ್ಲೂಕು ಘಟಕದ ಜಾರ್ಯಕರ್ತರು ರಾಜ್ಯದ ರೈತರ ಭೂಮಿ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು

ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಜಾರ್ಯಕರ್ತರು ರಾಜ್ಯದ ರೈತರ ಭೂಮಿ ಹಕ್ಕಿಗಾಗಿ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಅರ್ಜಿ ಸಲ್ಲಿಸಿರುವ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಹಕ್ಕುಪತ್ರ ನೀಡಬೇಕು. ವಿತರಣೆಯಲ್ಲಿ ಆಗುವ ಭ್ರಷ್ಟಾಚಾರ ತಡೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಜಮೀನು ಸಾಗುವಳಿ ಮಾಡುವ ರೈತರಿಗೆ ಹಕ್ಕುಪತ್ರ ನೀಡುವ ಬದಲು ಗುತ್ತಿಗೆ ನೀಡುವ ಕ್ರಮವನ್ನು ಹಿಂಪಡೆಯಬೇಕು. ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಗೆ ತಿದ್ದುಪಡಿ ತರಬೇಕು. 2005 ರ ಪೂರ್ವದಲ್ಲಿ ಸಾಗುವಳಿ ಮಾಡುತ್ತಿರುವ ಎಲ್ಲ ರೈತರಿಗೆ ಹಕ್ಕುಪತ್ರ ವಿತರಿಸಬೇಕು. ಕೈಗಾರಿಕಾ ಕಾರಿಡಾರ್ ಹೆಸರಲ್ಲಿ ರೈತರ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ರೈತ ವಿರೋಧಿ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಇರುವ ನಿವೇಶನ ರಹಿತರನ್ನು ಗುರುತಿಸಿ ಉಚಿತ ಹಿತ್ತಲು, ನಿವೇಶನ ಸಹಿತ ಮನೆ ನಿರ್ಮಿಸಿ ಕೊಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಭೂರಹಿತರು ಹಾಗೂ ದೇವದಾಸಿಯರಿಗೆ ತಲಾ ಐದು ಎಕರೆ ಜಮೀನು ನೀಡಬೇಕು ಎಂದು ಆಗ್ರಹಿಸಿದರು.
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಶಿರಸ್ತೇದಾರ್ ಮನೋಹರ ಮಾನೆ ಅವರಿಗೆ ನೀಡಲಾಯಿತು.
ಮುಖಂಡರಾದ ಆರ್.ವೆಂಕಟೇಶ್, ಎಸ್.ಎಂ.ನಾಗರಾಜ್, ವೆಂಕಟಮ್ಮ, ಜಿ.ಮಂಜುಳ, ನೇತ್ರಾವತಿ, ಶಿವಪ್ಪ, ಎಂ.ವಿ.ವಿಶ್ವನಾಥ್, ಶಿವಾರೆಡ್ಡಿ ಇದ್ದರು.

ರಾಷ್ಟ್ರಧ್ವಜ ಅಂಗೀಕಾರ ಅಮೃತಮಹೋತ್ಸವ ಕಾರ್ಯಕ್ರಮ
ಪ್ರತಿ ಭಾರತೀಯ ತ್ರಿವರ್ಣ ಧ್ವಜ ಗೌರವಿಸಬೇಕು – ಗಣೇಶ್

ಕೋಲಾರ:- ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಸ್ವಾವಲಂಬನೆಯ ಸಂಕೇತವಾಗಿರುವ ತ್ರಿವರ್ಣ ಧ್ವಜದ ಮಹತ್ವವನ್ನು ಪ್ರತಿಯೊಬ್ಬ ಭಾರತೀಯರು ಅರಿತು, ಹೆಮ್ಮೆಯಿಂದ ಗೌರವ ನೀಡಬೇಕೆಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.
ನಗರದ ಕಾರಂಜಿಕಟ್ಟೆ ಧರ್ಮರಾಯಸ್ವಾಮಿ ದೇವಾಲಯ ಸಮುದಾಯ ಭವನ ಸಭಾಂಗಣದಲ್ಲಿ ಶುಕ್ರವಾರ ಎಇಎಸ್ ಪಬ್ಲಿಕ್ ಶಾಲೆ ಮತ್ತು ಸುಭಾಷ್ ಶಾಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಧ್ವಜ ಅಂಗೀಕಾರ ಅಮೃತಮಹೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ದೇಶದ ಬಹಳಷ್ಟು ಜನರಿಗೆ ರಾಷ್ಟ್ರಧ್ವಜ ಸಂಹಿತೆಯ ಕುರಿತು ಅರಿವೇ ಇಲ್ಲವೆಂದು ವಿಷಾದಿಸಿದ ಅವರು, ಭಾರತ ಸೇವಾದಳ ಪ್ರತಿ ಶಾಲೆಯಲ್ಲಿಯೂ ರಾಷ್ಟ್ರಧ್ವಜ ಮಾಹಿತಿ ಶಿಬಿರಗಳ ಆಯೋಜಿಸುವ ಮೂಲಕ ಅರಿವು ಮೂಡಿಸುತ್ತಿದೆಯೆಂದು ಹೇಳಿದರು.
ರಾಷ್ಟ್ರಧ್ವಜವನ್ನು ಹೇಗೆ ಯಾವಾಗ ಹಾರಿಸಬೇಕು, ಹೇಗೆ ಯಾವಾಗ ಇಳಿಸಬೇಕು, ಹೇಗೆ ಮಡಚಿಡಬೇಕು, ಹರಿದು ಗಲೀಜಾದರೆ ಏನು ಮಾಡಬೇಕು, ರಾಷ್ಟ್ರಗೀತೆ ಹೇಗೆ ಹಾಡಬೇಕು, ರಾಷ್ಟ್ರಧ್ವಜಕ್ಕೆ ಹೇಗೆ ಧ್ವಜವಂದನೆ ಮಾಡಬೇಕು ಇತ್ಯಾದಿ ವಿಚಾರಗಳನ್ನು ವಿದ್ಯಾರ್ಥಿಗಳು ಸೇವಾದಳ ಶಿಬಿರಗಳ ಮೂಲಕ ಅರಿತುಕೊಳ್ಳಬಹುದು, ರಾಷ್ಟ್ರಧ್ವಜ ಅಂಗೀಕಾರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಯೋಜಿಸಿದ -Àಲ್ಗುಣ ಮತ್ತು ನಿವೃತ್ತ ಪೋಲೀಸ್ ಅಧಿಕಾರಿ ರವಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ರೆಡ್ ಕ್ರಾಸ್ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣಗೌಡ ಮಾತನಾಡಿ, ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರಗೀತೆಯ ಬಗ್ಗೆ ಸ್ಪಷ್ಟ ಮಾಹಿತಿ ಪಡೆಯುವುದರ ಜೊತೆಗೆ ವಿದ್ಯಾರ್ಥಿ ಸಮೂಹ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು, ಅದರಲ್ಲೂ ಯುವಕ ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಿ ಅಪತ್ಕಾಲಅಪಘಾತದಿಂದ ನರಳುತ್ತಿದ್ದವರಿಗೆ ಜೀವದಾನ ಮಾಡಬೇಕೆಂದರು.

ಅಧ್ಯಕ್ಷತೆವಹಿಸಿದ್ದ ನಿವೃತ್ತ ಅಬಕಾರಿ ಡಿವೈಎಸ್ಪಿ ಎಲ್.ಎ.ಮಂಜುನಾಥ್ ಮಾತನಾಡಿ, ನಕಲಿ ರಾಷ್ಟ್ರಭಕ್ತರ ನಡುವೆ ನೈಜ ರಾಷ್ಟ್ರಭಕ್ತಿಯನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು, ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಟ್ಟುಕೊಳ್ಳಲು ಸಹಕರಿಸಬೇಕೆಂದರು.
ಕಾರ್ಯಕ್ರಮದ ರೂವಾರಿ ನಿವೃತ್ತ ಪೋಲೀಸ್ ಅಧಿಕಾರಿ ರವಿ ಮತ್ತು ಫಲ್ಗುಣ ಮಾತನಾಡಿ, ಆಂಧ್ರಪ್ರದೇಶದ ಪಿಂಗಳಿ ವೆಂಕಣ್ಣ ತ್ರಿವರ್ಣ ಧ್ವಜವನ್ನು ರೂಪಿಸಿದ್ದು, 1947, ಜುಲೈ 22 ರಂದು ದೇಶವು ಅಂಗೀಕರಿಸಿತು. ಇದರ ನೆನಪಿಗಾಗಿ ವಿದ್ಯಾರ್ಥಿ ಸಮೂಹಕ್ಕೆ ರಾಷ್ಟ್ರ ಧ್ವಜದ ಮಾಹಿತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾಗಿ ವಿವರಿಸಿ, ರಾಷ್ಟ್ರಧ್ವಜ ಅಂಗೀಕಾರ ದಿನಾಚರಣೆಯನ್ನು ಇನ್ನು ಮುಂದೆ ಸರಕಾರವೇ ಎಲ್ಲೆಡೆ ಆಚರಿಸಬೇಕೆಂದು ಆಗ್ರಹಿಸಿದರು.
ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ನಿವೃತ್ತ ಯೋಧ ನಾರಾಯಣಪ್ಪ ಮಾತನಾಡಿ, ವಿದ್ಯಾರ್ಥಿ ಯುವ ಸಮೂಹವು ದೇಶ ಕಾಪಾಡುವ ಯೋಧರಾಗಲು ಮಾನಸಿಕವಾಗಿ ದೈಹಿಕವಾಗಿ ಸನ್ನದ್ಧರಾಗಬೇಕೆಂದು ಸಲಹೆ ನೀಡಿದರು.
ಬಿಸಿಎಂ ಜಿಲ್ಲಾಧಿಕಾರಿ ಸೋನಿಯಾ ಮಾತನಾಡಿ, ತ್ರಿವರ್ಣ ಧ್ವಜದ ತ್ಯಾಗ, ಶಾಂತಿ ಮತ್ತು ಸಮೃದ್ಧತೆ ಹಾಗೂ ಅಶೋಕ ಚಕ್ರದ ಪ್ರಗತಿಯ ಸಂದೇಶವನ್ನು ಪ್ರತಿ ವಿದ್ಯಾರ್ಥಿಯೂ ತನ್ನ ಜೀವನದಲ್ಲಿ ಅಳವಡಿಸಿಕೊಂಡು ಉನ್ನತಕ್ಕೇರಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಭಾರತ ದೇಶವನ್ನು ವಾಲಿಬಾಲ್ ತಂಡದಲ್ಲಿ ಪ್ರತಿನಿಧಿಸಿ ಬೆಳ್ಳಿ ಪದಕ ಪಡೆದ ತಂಡದಲ್ಲಿದ್ದ ಕೋಲಾರ ಜಿಲ್ಲೆಯ ಮಧುಕುಮಾರ್ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಅತ್ಯುತ್ತಮ ಸ್ಥಾನ ಗಳಿಸಿ ಶ್ರುತಿಯನ್ನು ಸನ್ಮಾನಿಸಲಾಯಿತು.
ರಾಷ್ಟ್ರಧ್ವಜ ಕುರಿತಂತೆ ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದರು. ಜಾನಪದ ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ..ಗೀತೆಯನ್ನು ಗಾಯನ ಮಾಡಿದರು. ವಿದ್ಯಾರ್ಥಿನಿಯರ ತಂಡದಿಂದ ನೃತ್ಯ ಕಾರ್ಯಕ್ರಮವಿತ್ತು. ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ವೇದಿಕೆಯಲ್ಲಿ ತಿಗಳ ಸಮುದಾಯದ ಮುಖಂಡರಾದ ವೆಂಕಟೇಶ್, ಮುನಿಯಪ್ಪ, ಜಯ ಕರ್ನಾಟಕ ಜಿಲ್ಲಾಧ್ಯಕ್ಷ ತ್ಯಾಗರಾಜು, ಸುಭಾಷ್ ಶಾಲೆಯ ಮುಖ್ಯ ಶಿಕ್ಷಕ ವೇಣುಗೋಪಾಲ್, ಸೇವಾದಳ ಜಿಲ್ಲಾ ಸಂಘಟಕ ದಾನೇಶ್ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರಧ್ವಜ ಅಂಗೀಕಾರ ಅಮೃತಮಹೋತ್ಸವ ದಿನಾಚರಣೆ ಅಂಗವಾಗಿ ಎಇಎಸ್ ಪಬ್ಲಿಕ್ ಶಾಲೆಯ ಮಕ್ಕಳು ಬೃಹತ್ ತ್ರಿವರ್ಣ ಧ್ವಜವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ್ದು ಗಮನ ಸೆಳೆಯಿತು.
ಎಇಎಸ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಸಂಧ್ಯ, ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ವರಿ ವಂದಿಸಿದರು.

ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ:ಕುಂದಾಪುರ ಹೋಬಳಿ ಮಟ್ಟದ ಥ್ರೋಬಾಲ್ ಪಂದ್ಯಾಟ

ಕುಂದಾಪುರ ಹೋಬಳಿ ಮಟ್ಟದ ಥ್ರೋಬಾಲ್ ಪಂದ್ಯಾಟವು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರದಲ್ಲಿ ಜರುಗಿತು.

ಬಾಲಕರ ವಿಭಾಗದಲ್ಲಿ : ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದರೆ , ವೆಂಕಟರಮಣ ಆಂಗ್ಲಮಾಧ್ಯಮ ಶಾಲೆ ಕುಂದಾಪುರ ಸ್ಥಾನ ಪಡೆಯಿತು

ಬಾಲಕಿಯರ ವಿಭಾಗದಲ್ಲಿ: ಸಂತ ಮೇರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ, ಪ್ರಥಮ ಸ್ಥಾನ ಪಡೆದರೆ. ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ದ್ವಿತೀಯ ಸ್ಥಾನ ಪಡೆಯಿತು

ಸಂತ ಲಾರೆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

ಮೂಡುಬೆಳ್ಳೆ: ಸಂತ ಲಾರೆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ. ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ,ಸಾಮಾಜಿಕ ಅರಣ್ಯ ಇಲಾಖೆ ಉಡುಪಿ ಜಿಲ್ಲೆ ,ಪ್ರಕೃತಿ ಪರಿಸರ ಸಂಘ, ರೋಟರಿ ಕ್ಲಬ್ ಮಣಿಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಲಯ ಉಡುಪಿ ಉಪ ವಲಯ ಅರಣ್ಯಾಧಿಕಾರಿ ರಶ್ಮಿ ಡಿ ,ಅರಣ್ಯ ಪ್ರೇರಕರಾದ ಪ್ರತ್ಯಕ್ಷ ಕಾಮತ್, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುಧಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಐಡ ಗಿಬ್ಬ ಡಿಸೋಜಾ, ಪ್ರೌಢಶಾಲಾ ವಿಭಾಗದ ಹಿರಿಯ ಹಿರಿಯ ಶಿಕ್ಷಕಿ ಸುನೀತಾ ಕಾಮತ್, ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜಾ ,ಎನ್ ಎಸ್ ಎಸ್ ಯೋಜನಾಧಿಕಾರಿ ಜೆಸಿಂತಾ ನತಾಲಿಯಾ ಲೋಬೋ, ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕ ವರ್ಗದವರು ಹಾಜರಿದ್ದರು.

ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೋಸೆಫ್ ಡಿಸೋಜ ಸ್ವಾಗತಿಸಿ ಇತಿಹಾಸ ಉಪನ್ಯಾಸಕರಾದ ನವೀನ ಕೊರೆಯ ವಂದಿಸಿದರು.

ಭಂಡಾರಕಾರ್ಸ್- ಹಿರಿಯರು,ಪೂರ್ವಿಕರು ಬೆಳೆಸಿದ ಪರಿಸರವನ್ನು ಹಾಳು ಮಾಡಲು ನಮಗೆ ಯಾವುದೇ ಹಕ್ಕಿಲ್ಲಾ : ಗುರುಪ್ರಸಾದ್

ಕುಂದಾಪುರ : “ಅತಿಯಾದ ಬೆಳವಣಿಗೆ ನಮ್ಮ ಹಿರಿಯರ ಅಥವಾ ಪೂರ್ವಿಕರು ಬೆಳೆಸಿದ ಪರಿಸರವನ್ನ ನಾವು ಹಾಳು ಮಾಡುತ್ತಿದ್ದೇವೆ. ಈ ಪರಿಸರವನ್ನು ಹಾಳು ಮಾಡಲು ನಮಗೆ ಯಾವುದೇ ಹಕ್ಕಿಲ್ಲಾ ” ಎಂದು ಗುರುಪ್ರಸಾದ್ ಶೆಟ್ಟಿ ಪರಿಸರ ಅಭಿಯುತರರು ಪುರಸಭೆ ಕುಂದಾಪುರ ಇವರು ಹೇಳಿದರು. ಅವರು ಇತ್ತೀಚಿಗೆ ಇಲ್ಲಿನ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಮಾನವನು ತನ್ನ ದೈನಂದಿನ ಬದುಕಿನಲ್ಲಿ ತಾನು ಬಳಸಿ ಎಸೆಯುವ ವಸ್ತುಗಳನ್ನ ಕ್ರಮಬದ್ಧವಾಗಿ ಸಂಗ್ರಹಣೆ ಮಾಡಿ ಸಂಸ್ಕರಣೆ,ಮರುಬಳಕೆ ಹಾಗೂ ವಿಲೇವಾರಿ ಮಾಡುವ ಪ್ರಕ್ರಿಯೆಯನ್ನು ವಿವರಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎನ್. ಪಿ. ನಾರಾಯಣ್ ಶೆಟ್ಟಿ ಪ್ರಾಂಶುಪಾಲರು, ಭಂಡಾರಕಾರ್ಸ್ ಕಾಲೇಜು ಕುಂದಾಪುರ ಇವರು ವಹಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೋಪಾಲ್ ಕೃಷ್ಣ ಶೆಟ್ಟಿ ಮುಖ್ಯ ಅಧಿಕಾರಿ ಪುರಸಭೆ ಕುಂದಾಪುರ ಮತ್ತು ರಾಮಚಂದ್ರ ಆಚಾರಿ ಎನ್.ಎಸ್.ಎಸ್ ಯೋಜನಾಧಿಕಾರಿ ಭಂಡಾರಕಾರ್ಸ್ ಕಾಲೇಜು ಕುಂದಾಪುರ ಇವರು ಉಪಸ್ಥಿತರಿದ್ದರು 200ಕ್ಕೂ ಹೆಚ್ಚು ಎನ್.ಎಸ್. ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ವಿದ್ಯಾರ್ಥಿನಿ ಭಾನುಪ್ರಿಯ ಸ್ವಾಗತಿಸಿ, ಚಿತ್ರಾ ನಿರೂಪಿಸಿ, ಸಿಂಚನಾ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು
.

ಭಂಡಾರ್ಕಾರ್ಸ್:ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಟೆಬಲ್ ಟೆನಿಸ್ ಟೂರ್ನಾಮೆಂಟ್

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಟೆಬಲ್ ಟೆನಿಸ್ ಟೂರ್ನಾಮೆಂಟ್ ನಡೆಯಿತು.
ಅಂತಿಮ ಪಂದ್ಯದಲ್ಲಿ ಹುಡುಗರು ವಿಭಾಗದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೊದಲ ಸ್ಥಾನ ಪಡೆದು ಚಾಂಪಿಯನ್ ತಂಡವಾಯಿತು. ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ ಕಾಲೇಜು ರನ್ನರ್ ಅಫ್ ಆಗಿ ದ್ವಿತೀಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಪುತ್ತೂರಿನ ವಿವೇಕಾನಂದ ಕಾಲೇಜು ಪಡೆಯಿತು.
ಹುಡುಗಿಯರ ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಶಿಪ್ ಪಡೆಯಿತು. ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ರನ್ನರ್ ಅಫ್ ಆಗಿ ದ್ವಿತೀಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಎಸ್.ಡಿ.ಎಂ ಕಾಲೇಜು ಉಜಿರೆ ಪಡೆಯಿತು. ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ನಿತೀಶ್ ಸುವರ್ಣ ಮತ್ತು ಉಡುಪಿಯ ಪೂರ್ಣಪ್ರಜ್ಞ ಕಾಲೇಜು ತಂಡದ ಭೂಮಿಕಾ ಪೂಜಾರಿ ಟೂರ್ನಾಮೆಂಟ್ ನ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿದರು.
ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದೋಮ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಟಿ.ಪ್ರಕಾಶ್ ಸೋನ್ಸ್, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜಾ, ವೀಕ್ಷಕರಾದ ಜಯರಾಮ ರೈ, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಜೇಮ್ಸ್ ಒಲಿವರ್ ಭಂಡಾರ್ಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಕುಂದಾಪುರದ ಟಾರ್ಪೋಡೋಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ ಗೌತಮ್ ಶೆಟ್ಟಿ ಮತ್ತು ಟೇಬಲ್ ಟೆನಿಸ್ ತರಬೇತುದಾರ ಅಶ್ವಿನ್ ಕುಮಾರ್ ಪಡುಕೋಣೆ ಮಂಗಳೂರು ವಿಶ್ವವಿದ್ಯಾಲಯದಿಂದ ನಿಯುಕ್ತರಾದ ವೀಕ್ಷಣೆ ಕಾರ ಬಿಜು ಜಾಕೋಬ್ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ವಿಜೇತರಿಗೆ ಬಹುಮಾನ ವಿತರಿಸಿದರು.