HOLY ROSARY CHURCH, KUNDAPUR – 450 th JUBILEE SOUVENIR 2021

ಕುಂದಾಪುರ: ಸಂತ ಮೇರೀಸ್ ಹಿ.ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

JANANUDI.COM NETWORK


ಕುಂದಾಪುರ, ಜೂ.21: “ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇಹ ಮತ್ತು ಮನಸ್ಸನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ಯೋಗಾಭ್ಯಾಸವನ್ನು ಮಾಡಿಕೊಂಡರೆ ಅವರ ಸರ್ವತೋಮುಖ ಬೆಳವಣಿಗೆಯಾಗುತ್ತದೆ” ಎಂದು ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ದತ್ತಾತ್ರೇಯ ನಾಯ್ಕ್ ಕುಂದಾಪುರ ಇವರು ಸೈಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ. ಇಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿದ್ದರು. ಶ್ರೀಮತಿ ಸಿಂತಿಯಾ ರಾಡ್ರಿಗಸ್ ಸ್ವಾಗತಿಸಿ , ಕುಮಾರಿ ಪ್ರೀತಿ ವಂದಿಸಿದರು. ಶ್ರೀಮತಿ ಜ್ಯೋತಿ ಡಿ’ಸಿಲ್ವ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಆನ್ನಿ ಕ್ರಾಸ್ತಾ,ಶ್ರೀಮತಿ ಗೀತಾ ನೊರೊನ್ನಾ ಮತ್ತು ಶಿಕ್ಷಕಿ ಶ್ರೀಮತಿ ಸಹಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು.ಈ ಸಂಧರ್ಭದಲ್ಲಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರು ನೀಡಿದ ಮಾಸ್ಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ : ಅಂತರಾಷ್ಟ್ರೀಯ ಯೋಗ ದಿನಾಚರಣೆ- ಅಂತರಾಷ್ಟ್ರೀಯ ಯೋಗಪಟು ಲಾಸ್ಯಾಳ ಯೋಗಾಸನ ಪ್ರದರ್ಶನ

JANANUDI.COM NETWORK

ಜೂ.21:ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯೋಪಾಧಾಯಿನಿ ಸಿಸ್ಟರ್‌ ತೆರೇಜ್‌ ಶಾಂತಿಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಯುತ ದತ್ತಾತ್ರೇಯ ನಾಯಕ್‌ ದೈಹಿಕ ಶಿಕ್ಷಣ ಪರಿವಿಕ್ಟಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರ ಇವರು ಅತಿಥಿಗಳಾಗಿ. ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.

 ಶಾಲೆಯ ಅಂತರಾಷ್ಟ್ರೀಯ ಯೋಗ ಪಟು 6ನೇ ತರಗತಿಯ ವಿದ್ಯಾರ್ಥಿನಿ ಲಾಸ್ಯಾಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿ ಆಕೆಯನ್ನು ಫಲ ಪುಷ್ಪದೊಂದಿಗೆ ಸನ್ಮಾನಿಸಿದರು. ಶಾಲಾ ದೈಹಿಕ ಶಿಕ್ಷಕ ಶ್ರೀಯುತ ರತ್ನಾಕರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು, ಶಾಲೆಯ ವಿದ್ಯಾರ್ಥಿನಿ ಹಾಗೂ ಅಂತರಾಷ್ಟ್ರೀಯ ಯೋಗಪಟು ಲಾಸ್ಯಾಳ ಯೋಗಾಸನ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದೈಹಿಕ ಶಿಕ್ಷಕ ಶ್ರೀಯುತ ರತ್ನಾಕರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೆರುಗನ್ನು ನೀಡಿದರು. ಈ ಸಭೆಯಲ್ಲಿ ಶಾಲಾ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಬಕ ಶ್ರೀಯುತ ಪ್ರಶಾಂತ್ ಲುವಿಸ್ ಧನ್ಯವಾದ ಸಮರ್ಪಿಸಿದರು.

ಭಂಡಾರ್ಕಾರ್ಸ್ : ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆ. ಯು. ಕೇಂದ್ರ ಉಡುಪಿ, ಕುಂದಾಪುರ ಪತಂಜಲಿ ಯೋಗ ಸಮಿತಿ ಇವರಿಂದ ವಿಶೇಷ ವಿಶ್ವ ಯೋಗ ದಿನಾಚರಣೆ

JANANUDI.COM NETWORK

ಕುಂದಾಪುರ: ದಿನಾಂಕ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕುಂದಾಪುರದ ಪತಂಜಲಿ ಯೋಗ ಸಮಿತಿ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ “ವಿಶ್ವ ಯೋಗ ದಿನಾಚರಣೆ” ಪ್ರಯುಕ್ತ ವಿಶೇಷ ಯೋಗ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ತಾಲೂಕು ಉಪವಿಭಾಗಾಧಿಕಾರಿ ಕೆ.ರಾಜು ಮಾತನಾಡಿ ಈ ಎಂಟನೆ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿ ಭಾರತ ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆ ಈ ಯೋಗಕಲೆ. ಇದನ್ನು ಜೀವನದ ಕಲೆಯಾಗಿಸಿಕೊಳ್ಳಬೇಕು. ಯೋಗವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಆರೋಗ್ಯ ನಮ್ಮದಾಗಿಸಿಕೊಳ್ಳೋಣ ಎಂದು ಕರೆ ನೀಡಿದರು.
ಕುಂದಾಪುರದ ಪತಂಜಲಿ ಯೋಗ ಸಮಿತಿಯ ವಿವೇಕ ಪೈ ಮಾತನಾಡಿ ನಮ್ಮನ್ನು ನಾವು ಅರಿಯಬೇಕು. ಜೀವನದಲ್ಲಿ ಅಷ್ಟಾಂಗ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿ ಮನಸ್ಸಿನ ಏಕಾಗ್ರತೆ ಮತ್ತು ಕುರಿತು ಸರಳ ಯೋಗವಿಧಾನ ಮತ್ತು ಯೋಗಾಭ್ಯಾಸವನ್ನುವನ್ನು ಕಾರ್ಯಾಗಾರದ ಮೂಲಕ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ನೆಹರು ಯುವ ಕೇಂದ್ರ ಉಡುಪಿಯ ಅಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ವಿಧ್ಯಾರ್ಥಿ ಸಂದೇಶ್ ಅವರಿಂದ ವಿಶೇಷ ಯೋಗ ಪ್ರದರ್ಶನ ನಡೆಯಿತು.
ಬೆಳಿಗ್ಗೆ 6.30ರಿಂದ 11.15ವರೆಗೆ ಯೋಗ ಕಾರ್ಯಕ್ರಮ ನಡೆಯಿತು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ವಂದಿಸಿದರು.
ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು.

ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ನರಸಿಂಹಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ ಪರಿಣಾಮವಾಗಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿರುವುದದಾಗಿ ಚುನಾವಣಾಧಿಕಾರಿ ಡಾ. ಮಂಜುನಾಥರೆಡ್ಡಿ ಪ್ರಕಟಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಮ್ಮ, ಪಿಡಿಒ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಎಫ್‍ಡಿಎ ದೇವರಾಜ್, ಮುಖಂಡರಾದ ಮುನಿವೆಂಕಟಪ್ಪ ಇದ್ದರು.

ಕೊಳತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎನ್.ಶ್ರೀನಿವಾಸ್ ಅವಿರೋಧ ಆಯ್ಕೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎನ್.ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷೆ ಕವಿತಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ ಪರಿಣಾಮವಾಗಿ ಕೆ.ಎನ್.ಶ್ರೀನಿವಾಸ್ ಅವಿರೋಧ ಆಯ್ಕೆಯಾಗಿರುವುದದಾಗಿ ಚುನಾವಣಾಧಿಕಾರಿ ಎಂ.ಕೆ.ಹುಸೇನ್ ಸಾಬ್ ಪ್ರಕಟಿಸಿದರು.
ಪಿಡಿಒ ಮೆಹರ್ ತಾಜ್, ಉಪಾಧ್ಯಕ್ಷೆ ವರಲಕ್ಷ್ಮಿ, ಮುಖಂಡರಾದ ಶಶಿಕುಮಾರ್, ಪ್ರಸನ್ನ, ಚಂಗಪ್ಪ, ದೇವರಾಜ್ ಇದ್ದರು.

ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ:ವಿಶ್ವ ಯೋಗ ದಿನಾಚರಣೆ

JANANUDI.COM NETWORK


ಕುಂದಾಪುರ:ಯೋಗದಿಂದ ಆರೋಗ್ಯವಂತರಾಗಿ ಬದುಕಬಹುದು.ಮಾನಸಿಕವಾಗಿ,ದೈಹಿಕವಾಗಿ ದೇಹ ಸದೃಢವಾಗುತ್ತದೆ.ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್ ಹೇಳಿದರು.
ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್
ಎನ್ ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭ ದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.
ಎನ್ ಸಿಸಿ ಅಧಿಕಾರಿ ಭಾಸ್ಕರ ಗಾಣಿಗ ಸ್ವಾಗತಿಸಿದರು. ಶಿಕ್ಷಕಿಯರಾದ ಸಿಸ್ಟರ್ ಚೇತನಾ,ಪ್ರೀತಿ ಪಾಯಸ್,ಸುಶೀಲ ಖಾರ್ವಿ,ಡೀನಾ ಪಾಯಸ್ ಸಹಕರಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಸಂತ ಲಾರೆನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

JANANUDI.COM NETWORK

ಶಿರ್ವಾ: “ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ದೇಹ ಮತ್ತು ಮನಸ್ಸು ಎರಡನ್ನು ಕೂಡ ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ವಿದ್ಯಾರ್ಥಿಗಳು ಪ್ರತಿ ದಿವಸ ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯದೊಂದಿಗೆ ಏಕಾಗ್ರತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ .ಆದ್ದರಿಂದ ನಾವೆಲ್ಲರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡೋಣ ಮತ್ತು ಆರೋಗ್ಯವಂತರಾಗಿ ಬಾಳೋಣ”ಎಂದು ಎಂದು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರು ಮತ್ತು ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಶ್ರೀ ದೇವದಾಸ ಹೆಬ್ಬಾರ್ ರವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ವಂದಿಸಿ ಶಿಕ್ಷಕ ಸ್ಟ್ಯಾನಿ ಮಿನೇಜಸ್ ನಿರೂಪಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ವಲೇರಿಯನ್ ನೊರೊನಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಜೆಸಿಂತಾ ನತಾಲಿಯಾ ಲೋಬೊ, ನಿವ್ರತ್ತ ಶಿಕ್ಶಿಕಿ ಶ್ರೀಮತಿ ಸರೋಜಿನಿ ಕಾಮತ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಲಯನ್ಸ್ ಮತ್ತು ಲಿಯೋ ಕ್ಲಬ್ ಮೂಡುಬೆಳ್ಳೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು . ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಮಾಡಿದರು .ಯೋಗ ತರಬೇತಿಯನ್ನು ಸಂಸ್ಥೆಯ ನಿವೃತ್ತ ಶಿಕ್ಷಕಿ ಸರೋಜಿನಿ ಕಾಮತ್ ರವರು ನಡೆಸಿಕೊಟ್ಟರು.

ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ವಿದ್ಯಾರ್ಥಿಗಳ ಪ್ರತಿ ಕ್ಷಣವೂ ಅಮೂಲ್ಯ-ಡಾ. ಗಣನಾಥ ಎಕ್ಕಾರು

JANANUDI.COM NETWORK


ವಿದ್ಯಾರ್ಥಿ ಜೀವನ ಅಮೂಲ್ಯ. ಪೌಢ ಶಾಲೆಯ ನಂತರವಂತೂ ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಭವಿಷ್ಯಕ್ಕಾಗಿ ಉಪಯೋಗಿಸಿಕೊಳ್ಳಬೇಕು. ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ತನ್ನತನವನ್ನು ರೂಪಿಸಿಕೊಳ್ಳಬೇಕು. ಜ್ಞಾನ, ಕೌಶಲ್ಯ, ಆರೋಗ್ಯ, ಶಿಸ್ತು ನಾಲ್ಕು ವಿಷಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಮುಖ್ಯ. ಒಂದು ಗುರಿಯನ್ನು, ಉದ್ದೇಶವನ್ನು ಇಟ್ಟುಕೊಳ್ಳಬೇಕು. 15 ವರ್ಷದಿಂದ 25 ವರ್ಷಗಳ ತನಕ 10 ವರ್ಷಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಮೊಬೈಲನ್ನು ತಮ್ಮ ವ್ಯಕ್ತಿತ್ವ ವಿಕಸನಕ್ಕಾಗಿ ಬೆಳೆಸಿಕೊಳ್ಳಬೇಕು ಎಂದು ಜಾನಪದ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಹೇಳಿದರು.
ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನವರು ಏರ್ಪಡಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಸಹಾಯಧನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ಎಸ್. ಎಸ್. ಎಲ್. ಸಿ.ಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿದ 250ಕ್ಕೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನವನ್ನು ಈ ಸಮಾರಂಭದಲ್ಲಿ ವಿತರಿಸಲಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಹಿತಿ ಪತ್ತೇದಾರಿ ಕಾದಂಬರಿಗಾರ್ತಿ ಸೌಮ್ಯ ಪುತ್ರನ್, “ವಿದ್ಯಾರ್ಥಿಗಳು ಜೀವನದ ಸವಾಲುಗಳನ್ನು ಎದುರಿಸುವುದು ಹೇಗೆ” ಎಂಬ ಬಗ್ಗೆ ಬಹಳ ಪರಿಣಾಮಕಾರಿಯಾಗಿ ಮಾತನಾಡಿದರು.
“ಯಾವುದೇ ಸಮಸ್ಯೆ ಎದುರಾದರೂ ಆತ್ಮಹತ್ಯೆಯಂತಹ ಕ್ರಮಕ್ಕೆ ಯಾರೂ ಮುಂದಾಗಬಾರದು. ಮಾನಸಿಕ ಒತ್ತಡಗಳನ್ನು ಪರಿಹರಿಸಿಕೊಳ್ಳಲು ಮಾರ್ಗೋಪಾಯಗಳಿವೆ. ಅಂಕ ಕಡಿಮೆ ಬಂದವರೂ, ಶಾಲಾ ವಿದ್ಯಾಭ್ಯಾಸ ಸರಿಯಾಗಿ ಪಡೆಯಲಾಗ ದಿದ್ದವರೂ, ದೊಡ್ಡ ಸಾಧನೆ ಮಾಡಿದ್ದಾರೆ. ನಾನು ವಿದೇಶಿ ಕಂಪೆನಿಗಳಿಗಾಗಿ ಕೆಲಸ ಮಾಡುತ್ತಿದ್ದೆ, ಆದರೆ ಯಾವುದೋ ಅಪರೂಪದ ಕಾಯಿಲೆಯಿಂದ ದೃಷ್ಠಿ ಹೋಯಿತು. ಆದರೆ ನನಗೆ ಸಾಹಿತ್ಯ ಕ್ಷೇತ್ರದಲ್ಲಿ ಈ ಹಿಂದೆ ಇದ್ದ ಆಸಕ್ತಿಯನ್ನೆ ಬೆಳೆಸಿಕೊಂಡು ಇಂದು ಆಧುನಿಕ ತಂತ್ರಜ್ಞಾನ ಹಾಗೂ ನನ್ನ ಆಪ್ತರಾದ ಪ್ರೇಮ ಆಂಟಿಯ ಸಹಕಾರದಿಂದ ಹಲವು ಪತ್ತೇದಾರಿ ಕಾದಂಬರಿಗಳನ್ನು ಬರೆದು ಆ ಮೂಲಕ ಗುರುತಿಸಲ್ಪಟ್ಟಿದ್ದೇನೆ.” ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ವಹಿಸಿದ್ದರು.
ಗಿಳಿಯಾರು ಕುಶಲ ಹೆಗ್ಡೆಯವರ ಹಿರಿಯ ಪುತ್ರ ಉದಯ ಹೆಗ್ಡೆ ವೇದಿಕೆಯಲ್ಲಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿದರು. ಸ್ನೇಹಾ ರೈ, ಕಿಶೋರ್ ಹೆಗ್ಡೆ, ಸ್ವರೂಪ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು. ಎಸ್. ಎಸ್. ಎಲ್. ಸಿ. ಯಲ್ಲಿ ಪೂರ್ಣಾಂಕ ಪಡೆದು ಪ್ರಥಮ ರ್ಯಾಂಕ್ ಪಡೆದ ಸಿದ್ಧಾಪುರದ ವೈಷ್ಣವಿ ಶೆಟ್ಟಿ, ಕಾಳಾವರದ ನಿಶಾ ಹಾಗೂ ಕಂಬದಕೋಣೆಯ ಅಕ್ಷತಾ ನಾಯಕ್ ಅವರನ್ನು ಗೌರವಿಸಲಾಯಿತು.
ಸಮಾಜ ಸೇವಕ ರಾಧಾದಾಸ್ ಅವರನ್ನು ಗೌರವಿಸಿ ಕುಂಭಾಶಿ ಅಂಗನವಾಡಿ ಕಟ್ಟಡಕ್ಕೆ ಆರ್ಥಿಕ ನೆರವು ನೀಡಲಾಯಿತು.
ಎಂಟನೇ ವರ್ಷ ಪ್ರಾಯದಲ್ಲೇ ಶಿಶುಗೀತೆಗಳನ್ನು ಬರೆದು “ಗುಬ್ಬಚ್ಚಿ” ಪುಸ್ತಕ ಪ್ರಕಟಿಸಿದ ಎಚ್. ವಿಧಾತ್ರೀ ರವಿ ಶಂಕರ್ ಅವರನ್ನು ಅಭಿನಂದಿಸಲಾಯಿತು.

ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 97 ಅಂಕ ಪಡೆದು ಸಾಧನೆ ಮಾಡಿದ ಸೋಹನ್ ಪೂಜಾರಿ ಗಿಳಿಯಾರು ಅವರನ್ನು ಗುರುತಿಸಿ ಅವರ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಟ್ರಸ್ಟ್ ಮೂಲ ನಿರ್ವಹಿಸುವ ಪ್ರಕಟಣೆ ಮಾಡಲಾಯಿತು.
ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನ
ಕೆ. ನಾರಾಯಣ, ಜಿ. ಸಂತೋಷ ಕುಮಾರ್ ಶೆಟ್ಟಿ ಹಾಗೂ ಎಚ್. ಸೋಮಶೇಖರ ಶೆಟ್ಟಿ ಪ್ರತಿಭಾವಂತ ವಿದ್ಯಾರ್ಥಿಗಳ ವಿವರ ನೀಡಿದರು.
ಟ್ರಸ್ಟ್‍ನ ಕಾರ್ಯದರ್ಶಿ ಯು. ಎಸ್. ಶೆಣೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಪಿ. ಜಯವಂತ ಪೈ ವಂದಿಸಿದರು.

ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ‘ಎನ್.ಸಿ.ಸಿಯ ವಿಶ್ವ ಯೋಗ ದಿನಾಚರಣೆ

JANANUDI.COM NETWORK


ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು .
ಯೋಗ ಒಂದು ಸರ್ವರೋಗ ನಿವಾರಣಾ ತಂತ್ರವಾಗಿದೆ .ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಕ್ಕೆ ಸೀಮಿತಗೊಳ್ಳದೆ ಪ್ರತಿನಿತ್ಯ ಜೀವನಶೈಲಿಯಲ್ಲಿ ಜನಗಳು ಯೋಗ ಮಾಡುವ ಮೂಲಕ ನಿತ್ಯ ಆರೋಗ್ಯವಂತ ರಾಗುವರು ಎಂದು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ವಿಠ್ಠಲ್ ನಾಯ್ಕರವರು ಮಾತನಾಡಿ, ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿಸಿದರು ಮತ್ತು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಎನ್.ಸಿ.ಸಿಯ ಬಿ ‘ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಕೆಡೆಟ್ ಮೋಹಿತ ಎನ್ ಸಾಲಿಯಾನ, ಆಶಿಶ್ ಪ್ರಸಾದ್ , ಧೀರಜ್ ಆಚಾರ್ಯ, ರಿಯಾನ್ ಡಿಸೋಜಾ, ವಿನೋಲ್ ನೊರೊನ್ಹಾ, ಮಂಜುನಾಥ್ ಅಮರಾವಟಿ, ಶ್ರೇಯಸ್ ವಿ ಕೋಟಿಯನ್, ದೀಪಕ್, ಸೂರಜ್,ರತನ್ ಕೋಟ್ಯಾನ್, ಶೆಟ್ಟಿ ತರುಣ್ ರಮೇಶ, ಜನಿಸಿಯಾ ನೊರೊನ್ಹಾ, ಎಲ್ರುಶಾ ಮಿಲಿನಾ ಡಿಸಾ, ರಿಯಾ ಆನ್ ನೆವಿಲ್ ಲೋಬೋ ನವ್ಯ ಆಚಾರ್ಯ, ದೀಕ್ಷಾ ಪಿ ಸಾಲಿಯಾನ್, ದೀಪ್ತಿ, ರಕ್ಷಿತಾ, ನಿವೇದಿತ ಪೂಜಾರಿ, ರಿಯಾ ಸರೀನಾ ಡಿಸೋಜಾ, ಸೆರಾ ಮಾತೆ ಮ್ಯಾಕ್ವಾನ್ ಇವರನ್ನುಅಭಿನಂದಿಸಲಾಯಿತು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ, ವಿಶ್ವ ಯೋಗ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು.
ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ಸರ್ವರನ್ನೂ ಸ್ವಾಗತಿಸಿ , ಕೆಡೆಟ್ ಸುಶ್ಮಿತಾ ಎಸ್ ಅಮೀನ್ ವಂದಿಸಿದರು. ಕೆಡೆಟ್ ಶೆಟ್ಟಿಗಾರ್ ಹೇಮಶ್ರೀ ಸುದರ್ಶನ್ ಕಾರ್ಯಕ್ರಮವನ್ನು ನಿರೂಪಿಸಿದರು.